ಯಲ್ಲಾಪುರ ತಾಲೂಕಿನ ಬೇಡ್ತಿ ನದಿಯ ಸೇತುವೆ ಘಟ್ಟದಲ್ಲಿ ನಡೆದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರವಿವಾರ ಮದ್ಯಾಹ್ನ ನಡೆದಿದೆ.
ದ್ವಿಚಕ್ರವಾಹನದಲ್ಲಿ ಮೂವರು ಪ್ರಯಾಣಿಸುತ್ತಿದ್ದು ಸಾರಿಗೆ ಸಂಸ್ಥೆಯ ಬಸ್ಸಿಗೆ ಡಿಕ್ಕಿ ಹೊಡೆದಿದ್ದಾರೆ. ಬೈಕ್ ಸವಾರರು ದಾವಣಗೆರೆ ಮೂಲದವರಾಗಿದ್ದು.ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದರೆ ಇನ್ನಿಬ್ಬರಿಗೂ ಗಂಭೀರ ಪೆಟ್ಟಾಗಿದೆ. ಆಸ್ಪತ್ರೆಗೆ ರವಾನಿಸಲಾಗಿದೆ.ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಘಟನೆ ಪರಿಶೀಲಿಸಿದ್ದಾರೆ.
ವರದಿ: ಶ್ರೀಪಾದ ಹೆಗಡೆ