ಸರ್ಕಾರವು ಟೋಲ್ ರದ್ದುಗೊಳಿಸುತ್ತಿದೆ ಮತ್ತು ಶೀಘ್ರದಲ್ಲೇ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನ ಪ್ರಾರಂಭಿಸಲಾಗುವುದು ಎಂದು ನಿತಿನ್ ಗಡ್ಕರಿ ಶುಕ್ರವಾರ ಜುಲೈ 26ರಂದು ಹೇಳಿದರು. ಟೋಲ್ ಸಂಗ್ರಹವನ್ನ ಹೆಚ್ಚಿಸುವುದು ಮತ್ತು ಟೋಲ್ ಪ್ಲಾಜಾಗಳಲ್ಲಿ ದಟ್ಟಣೆಯನ್ನ ಕಡಿಮೆ ಮಾಡುವುದು ಈ ವ್ಯವಸ್ಥೆಯನ್ನ ಜಾರಿಗೆ ತರುವ ಹಿಂದಿನ ಉದ್ದೇಶವಾಗಿದೆ.
ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿದ ಅವರು, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ (GNSS) ಜಾರಿಗೆ ತರಲಿದೆ ಎಂದು ಹೇಳಿದರು.
ಇದನ್ನು ಆಯ್ದ ಟೋಲ್ ಪ್ಲಾಜಾಗಳಲ್ಲಿ ಮಾತ್ರ ಮಾಡಲಾಗುತ್ತದೆ. ನಿಮ್ಮ ಬ್ಯಾಂಕ್ ಖಾತೆಯಿಂದ ಹಣವನ್ನ ಕಡಿತಗೊಳಿಸಲಾಗುತ್ತದೆ ಮತ್ತು ನೀವು ಪ್ರಯಾಣಿಸುವ ದೂರಕ್ಕೆ ಅನುಗುಣವಾಗಿ ಶುಲ್ಕ ವಿಧಿಸಲಾಗುತ್ತದೆ. ಇದು ಸಮಯ ಮತ್ತು ಹಣವನ್ನ ಉಳಿಸುತ್ತದೆ. ಈ ಮೊದಲು ಮುಂಬೈನಿಂದ ಪುಣೆಗೆ ಪ್ರಯಾಣಿಸಲು 9 ಗಂಟೆಗಳು ತೆಗೆದುಕೊಳ್ಳುತ್ತಿತ್ತು, ಈಗ ಅದು 2 ಗಂಟೆಗಳಿಗೆ ಇಳಿದಿದೆ” ಎಂದು ನಿತಿನ್ ಗಡ್ಕರಿ ಹೇಳಿದರು.

error: Content is protected !!