ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಯಲ್ಲಿ ಅಭಿನಯಿಸಿರುವ ನಟಿ ಯಮುನಾ 12 ವರ್ಷಗಳ ಹಿಂದೆ ದೊಡ್ಡ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದರು. ಬೆಂಗಳೂರಿನ ಐಷಾರಾಮಿ ಹೋಟೆಲ್‌ನಲ್ಲಿ ನಾಲ್ಕು ಮಹಡಿಗಳನ್ನು ಬಾಡಿಗೆ ಪಡೆದುಕೊಂಡು, ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಆರೋಪದಡಿ ಪೊಲೀಸರು ರೇಡ್ ಮಾಡಿ, ನಟಿ ಯಮುನಾರನ್ನು ವಶಕ್ಕೆ ಪಡೆದಿದ್ದರು. ಈ ಘಟನೆಯಲ್ಲಿ ನಾನು ನಿರಪರಾಧಿ ಎಂದು ಸಾಬೀತು ಮಾಡಿದ್ದರೂ, ಜನರು ಪದೆ ಪದೇ ಸಾಮಾಜಿಕ ಜಾಲತಾಣದಲ್ಲಿ ನನ್ನನ್ನು ಟಾರ್ಗೆಟ್ ಮಾಡುತ್ತಿರುವುದು ತಪ್ಪು ಎಂದು ಹೇಳಿಕೊಂಡಿದ್ದಾರೆ.
‘ಎಲ್ಲರಿಗೂ ನಮಸ್ಕಾರ. ಜೀವನದಲ್ಲಿ ನನ್ನನ್ನು ನಾನು ಎಷ್ಟು ಮೋಟಿವೇಟ್ ಮಾಡಿಕೊಂಡರೂ ಕಾಡುತ್ತಿರುವುದು ಒಂದೇ ನೋವು. ಇಷ್ಟು ವರ್ಷವಾದರೂ ಆ ನೋವು ನನ್ನಲ್ಲಿ ಉಳಿದು ಬಿಟ್ಟಿದೆ. ಪದೇ ಪದೇ ನೋವಾಗಲು ಕಾರಣ ಸೋಷಿಯಲ್ ಮೀಡಿಯಾ. ಬಹಳ ವರ್ಷಗಳ ಹಿಂದೆಯೇ ದೊಡ್ಡ ಸಮಸ್ಯೆಯೊಂದನ್ನು ಎದುರಿಸಿ ಅದರಿಂದ ಹೊರ ಬಂದು ನಿಶ್ಚಿಂತೆಯಿಂದ ಜೀವನ ನಡೆಸುತ್ತಿರುವೆ. ಆ ಸಮಸ್ಯೆಯಲ್ಲಿ ಹೇಗೆ ಸಿಲುಕಿಕೊಂಡೆ ಎಂದು ಈಗಾಗಲೇ ಅನೇಕ ಸಂದರ್ಶನದಲ್ಲಿ ಹೇಳಿಕೊಂಡು, ನಾನಾ ರೀತಿಯಲ್ಲಿ ಕ್ಲಾರಿಟಿ ಕೊಟ್ಟಿದ್ದೇನೆ. ಈ ವಿಚಾರದಲ್ಲಿ ಸ್ವತಃ ಕೋರ್ಟ್ ಕೂಡ ನನಗೆ ಕ್ಲೀನ್ ಚಿಟ್ ಕೊಟ್ಟಿದೆ. ನನ್ನನ್ನು ನ್ಯಾಯ ಗೆಲ್ಲಿಸಿದೆ. ನ್ಯಾಯಯುತವಾಗಿ ನಾನು ಗೆಲ್ಲುವು ಸಾಧಿಸಿರುವೆ. ಆದರೆ ಸಾಮಾಜಿಕ ಜಾಲತಾಣವನ್ನು ನಾನು ಕಂಟ್ರೋಲ್ ಮಾಡಲು ಆಗುತ್ತಿಲ್ಲ,’ ಎಂದು ವಿಡಿಯೋದಲ್ಲಿ ಯಮುನಾ ನೋವು ತೋಡಿಕೊಂಡಿದ್ದಾರೆ.

 

View this post on Instagram

 

A post shared by Y Yamuna (@actressyamunaofficial)

error: Content is protected !!