ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಕೊತ್ತಗೆರೆ ಗ್ರಾಮದಲ್ಲಿ ನವಜಾತ ಶಿಶುವಿನ ಮಾರಾಟಕ್ಕೆ ಮಧ್ಯಸ್ಥಿಕೆ ವಹಿಸಿದ ಆರೋಪದ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಜ್ಯೋತಿ ಅವರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವರದಿ ಆಧಾರದ ಮೇಲೆ ಈ ಕ್ರಮ ಕೈಗೊಂಡಿದ್ದಾರೆ.
ಮಾಗಡಿ ಮೂಲದ ಅವಿವಾಹಿತ ಯುವತಿ ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಈ ಮಗು ಶಿಶು ಅಪಹರಣ ಅಥವಾ ಅನಾಥ ಶಿಶು ಎಂದು ಪರಿಗಣಿಸದೇ, ನೇರವಾಗಿ ಮಾರಾಟದ ಯೋಜನೆ ಮಾಡಲಾಗಿದೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಜ್ಯೋತಿ ಮತ್ತು ಮತ್ತೊಬ್ಬ ವ್ಯಕ್ತಿ ಮುಬಾರಕ್ ಅವರು ಶಿಶುವನ್ನು ₹60 ಸಾವಿರಕ್ಕೆ ಮಾರಾಟ ಮಾಡಿರುವುದು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಈ ಕುರಿತು ಸೋಮವಾರ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಮಕ್ಕಳ ಹಕ್ಕುಗಳ ಉಲ್ಲಂಘನೆ ಮತ್ತು ಶಿಶುಗಳ ಸುರಕ್ಷತೆಗೆ ಭಂಗ ತರುವ ಈ ಘಟನೆಯ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ.
ಯಾದಗಿರಿ ಜಿಲ್ಲೆ ಗುರುಮಿಟ್ಕಲ್ ತಾಲೂಕು ಸೈದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿಂದಿ ಆಯುವ ಯುವತಿಯರಿಬ್ಬರ ಶವ ನೀಲಹಳ್ಳಿ ಕೆರೆಯಲ್ಲಿ ದಿನಾಂಕ…
ಪಟ್ಟಣ: ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಶಿಕ್ಷಕ ಕೆ.ಎಚ್. ಗಿರೀಶ್ ವಿರುದ್ಧ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ…
ಬೆಳಗಾವಿಯಲ್ಲಿ ಕನ್ನಡ ಭಾಷೆ ಬಳಸುವಂತೆ ಹೇಳಿದ ಕಾರಣಕ್ಕೆ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿ, ಬಳಿಕ ಆತನ ವಿರುದ್ಧ…
ಕೋಲ್ಕತ್ತಾದ ಕುಮಾರ್ತುಲಿಯ ಗಂಗಾ ನದಿಯ ದಡದಲ್ಲಿ ಇಂದು ಬೆಳಗ್ಗೆ ಭೀಕರ ಘಟನೆ ಬೆಳಕಿಗೆ ಬಂದಿದೆ. ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ನದಿಗೆ…
ವಾಡಾ: ಇಲ್ಲಿನ ಪಾಲಿ ಗ್ರಾಮದ ಬಳಿ ನಡೆದ ಪೊಲೀಸ್ ಕಾರ್ಯಾಚರಣೆಯಲ್ಲಿ ₹14 ಲಕ್ಷ ಮೌಲ್ಯದ ನಕಲಿ ನೋಟುಗಳು ವಶಪಡಿಸಿಕೊಳ್ಳಲಾಗಿದೆ. ಖಚಿತ…
ತುಮಕೂರು ಜಿಲ್ಲೆಯಲ್ಲಿ ಶಿಶು ಮಾರಾಟ ಜಾಲ ಬೆಳಕಿಗೆ ಬಂದಿದ್ದು, ಈ ಸಂಬಂಧ ಐವರು ಪೊಲೀಸರ ವಶಕ್ಕೆ ಒಳಗಾಗಿದ್ದಾರೆ. ಫೆಬ್ರುವರಿ 20…