ಭಾರತೀಯ ರೈಲ್ವೆ 7,951 ಜೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಈ ಅಧಿಸೂಚನೆಯ ಮೂಲಕ ಸುಮಾರು 7,951 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಇದರಲ್ಲಿ ಕೆಮಿಕಲ್ ಸೂಪರ್ವೈಸರ್ ಮತ್ತು ರಿಸರ್ಚ್ ಮತ್ತು ಮೆಟಲರ್ಜಿಕಲ್ ಸೂಪರ್ವೈಸರ್ / ರಿಸರ್ಚ್ – 13 ಹುದ್ದೆಗಳು ಸೇರಿವೆ. ಜೂನಿಯರ್ ಎಂಜಿನಿಯರ್, ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಮತ್ತು ಕೆಮಿಕಲ್ ಮತ್ತು ಮೆಟಲರ್ಜಿಕಲ್ ಅಸಿಸ್ಟೆಂಟ್ – 7,934 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ
ಈ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವವರು ಸಂಬಂಧಿತ ವಿಭಾಗದಲ್ಲಿ ಡಿಪ್ಲೊಮಾ ಅಥವಾ ಪದವಿಯನ್ನು ಪೂರ್ಣಗೊಳಿಸಿರಬೇಕು. ಆಗ ಮಾತ್ರ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ. ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಬಿಸಿಎ/ಬಿಟೆಕ್ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದು. ಡಿಪ್ಲೊಮಾ ಪೂರ್ಣಗೊಳಿಸಿದವರು ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ವಯಸ್ಸು
ಈ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವವರು ಕನಿಷ್ಠ 18 ರಿಂದ ಗರಿಷ್ಠ 36 ವರ್ಷಗಳ ನಡುವೆ ಇರಬೇಕು. ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಸಂಬಳ
ಈ ಸರ್ಕಾರಿ ಕೆಲಸಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,400 ರೂ. ಸರ್ಕಾರವು ನೀಡುವ ಇತರ ಪ್ರಯೋಜನಗಳು ಸಹ ಅನ್ವಯವಾಗುತ್ತವೆ.
ಶುಲ್ಕ
*ಒಬಿಸಿ – 500
*ಮಹಿಳೆಯರು ಮತ್ತು ಎಸ್ಸಿ / ಎಸ್ಟಿ – 250
ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (https://www.rrbapply.gov.in/) ಹೆಸರು ನೋಂದಾಯಿಸಿ ಲಾಗಿನ್ ಆಗಿ. ಕಂಡುಬರುವ ಅಪ್ಲಿಕೇಷನ್ ಫಾರಂ ಅನ್ನು ಭರ್ತಿ ಮಾಡಿ. ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ. ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್ ವಿಳಾಸ: indianrailways.gov.in ಗೆ ಭೇಟಿ ನೀಡಿ ಅಥವಾ ಹೆಲ್ಪ್‌ಲೈನ್ ನಂಬರ್: 9592001188, 01725653333 ಕ್ಕೆ ಕರೆ ಮಾಡಿ.
ಪರೀಕ್ಷೆ ವಿಧಾನ
ಈ ಸರ್ಕಾರಿ ಉದ್ಯೋಗಗಳಿಗೆ ಪರೀಕ್ಷೆಯನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಆಧಾರದ ಮೇಲೆ ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಪ್ರಮಾಣಪತ್ರ ಪರಿಶೀಲನೆಗೆ ಒಳಪಡಿಸಲಾಗುತ್ತದೆ ಮತ್ತು ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ. ಅದರಲ್ಲಿ ಉತ್ತೀರ್ಣರಾದವರಿಗೆ ಉದ್ಯೋಗ ನೀಡಲಾಗುವುದು.