ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಮರಾಠಿ ಯುವಕರ ಗೂಂಡಾಗಿರಿ ಮತ್ತೊಮ್ಮೆ ಮರುಕಳಿಸಿದ್ದು, ಕನ್ನಡ ಮಾತನಾಡಿದ ಕಾರಣಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ನಾಯಕನ ಮೇಲೆ ಹಲ್ಲೆ ನಡೆದ ಘಟನೆ ಬೆಳಕಿಗೆ ಬಂದಿದೆ.
ಜಾಂಬೋಡಿ ಕ್ರಾಸ್ ಬಳಿ ಈ ಘಟನೆ ಸಂಭವಿಸಿದ್ದು, ಹಲ್ಲೆಗೆ ಗುರಿಯಾದವರು ಖಾನಾಪುರ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣದ ಉಪಾಧ್ಯಕ್ಷ ಜಯವಂತ ನಿಡಗಲ್ಕರ್. ಮರಾಠಿ ಯುವಕರ ಗುಂಪು ಅವರ ಮೇಲೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ನಂತರ ಸ್ಥಳದಿಂದ ಪರಾರಿಯಾಗಿದೆ.
ಘಟನೆಯ ನಂತರ, ಗಾಯಗೊಂಡ ಜಯವಂತ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ.
ಈ ಘಟನೆಯಿಂದ ಕೆಲವೇ ದಿನಗಳ ಹಿಂದಷ್ಟೇ ಮತ್ತೊಂದು ಹಲ್ಲೆ ಪ್ರಕರಣ ನಡೆದಿದೆ. ಖಾನಾಪುರದಲ್ಲೇ, ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಕನ್ನಡ ಮಾತನಾಡಿದ್ದಕ್ಕೆ ನಿರ್ದಯ ಹಲ್ಲೆಗೆ ಒಳಗಾಗಿದ್ದ. ಈ ಸಂಬಂಧ ಪೊಲೀಸರು ತನಿಖೆ ನಡೆಸಿ ಕೆಲವರನ್ನು ಬಂಧಿಸಿದ್ದಾರೆ.
ಈ ಘಟನೆಗಳ ಪರಿಪ್ರೇಕ್ಷ್ಯದಲ್ಲಿ ಕನ್ನಡಿಗರು ಆತಂಕ ವ್ಯಕ್ತಪಡಿಸಿದ್ದು, ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.
ಚೆನ್ನೈ: ಮೂರನೇ ತರಗತಿಯ ವಿದ್ಯಾರ್ಥಿಗೆ ಹಿಂದಿ ಪದ್ಯ ಕಂಠಪಾಠ ಮಾಡಲಾಗದ ಕಾರಣ ಹಿನ್ನಲೆಯಲ್ಲಿ ಶಿಕ್ಷಕಿ ದೈಹಿಕ ಶಿಕ್ಷೆ ನೀಡಿದ ಆರೋಪಕ್ಕೆ…
ಉತ್ತರಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ನಡೆದ ಅಘಾತಕಾರಿ ಘಟನೆಯೊಂದು ವಿದ್ಯಾರ್ಥಿಗಳ ಸುರಕ್ಷತೆಯ ಕುರಿತು ಗಂಭೀರವಾದ ಪ್ರಶ್ನೆಗಳನ್ನು ಎಬ್ಬಿಸಿದೆ. ವಿದ್ಯಾರ್ಥಿಯೊಬ್ಬನು ಪ್ರಶ್ನೆಗೆ ಉತ್ತರಿಸದ…
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ವೈದ್ಯರ ನಿರ್ಲಕ್ಷ್ಯದ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಇದರಿಂದ ಅನೇಕರು ತಮ್ಮ ಪ್ರಾಣಕ್ಕೆ ಭಯಪಡುವಂತಾಗಿದೆ. ಸಿಸೇರಿಯನ್ ಶಸ್ತ್ರಚಿಕಿತ್ಸೆಯ…
ಕಲಬುರಗಿ: ನಗರದ ರೋಜಾ ಠಾಣೆ ವ್ಯಾಪ್ತಿಯಲ್ಲಿ ಘಟಿಸಿದ ಘಟನೆಗೆ ಸಂಬಂಧಿಸಿದಂತೆ ಬಂಧಿತ ಆರೋಪಿ ಪೊಲೀಸರ ವಶದಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದು ಚರ್ಚೆಗೆ…
ಬೆಂಗಳೂರು: ಬೊಮ್ಮನಹಳ್ಳಿ ಪೊಲೀಸ್ ಠಾಣೆಯ ಕಾನ್ಸ್‌ಟೆಬಲ್ ಅರುಣ್ ಅಪ್ರಾಪ್ತ ಬಾಲಕಿಯನ್ನು ನಂಬಿಸಿ ಅತ್ಯಾಚಾರ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯು…
ಬೆಂಗಳೂರು: ಕರ್ತವ್ಯ ನಿರತ ಮಹಿಳಾ ಕಾನ್‌ಸ್ಟೇಬಲ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪದ ಮೇಲೆ ಇಬ್ಬರ ವಿರುದ್ಧ ಹುಳಿಮಾವು…