ಹಳೇಹುಬ್ಬಳ್ಳಿ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ 5 ಜನರನ್ನು ಬಂಧನ ಮಾಡುವ ಕಾರ್ಯಾಚರಣೆಯಲ್ಲಿ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ ಈ ಪ್ರಕರಣದಲ್ಲಿ ಬಂಧಿತರಾದ 5 ಜನರು ಬೇರೆ ಬೇರೆ ಜಿಲ್ಲೆಗಳಲ್ಲಿ ಗಾಂಜಾ ಖರೀದಿಸಿಕೊಂಡು ಬಂದು ಚಿಕ್ಕ ಚಿಕ್ಕ ಗಾಂಜಾ ಪ್ಯಾಕೆಟ್ ಗಳನ್ನಾಗಿ ಮಾಡಿ ಹಳೇಹುಬ್ಬಳ್ಳಿ ಮಾರುತಿ ನಗರ ಶ್ರೀ ಆಂಜನೇಯ ದೇವಸ್ಥಾನದ ಹತ್ತಿರ ಮಾರಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಆಧರಿಸಿದ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಶ್ರೀ ಸುರೇಶ್ ಯಳ್ಳೂರ ನೇತೃತ್ವದ ತಂಡ ಏಕಾಏಕಿ ದಾಳಿ ಮಾಡಿ 5 ಜನ ಆರೋಪಿಗಳನ್ನು ಬಂಧನ ಮಾಡಿದ್ದಾರೆ ಈ ಪ್ರಕರಣದಲ್ಲಿ ಬಂಧಿತರಿಂದ 10200 ರೂ ಮೌಲ್ಯದ 1135 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ ಈ ಕಾರ್ಯಾಚಣೆಯಲ್ಲಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಶ್ರೀ ಸುರೇಶ್ ಯಳ್ಳೂರ ಹಾಗೂ ಪೊಲೀಸ್ ಸಬ್ ಇನ್ಸಪೆಕ್ಟರ್ ಶ್ರೀ ಶಿವಾನಂದ್ ಬನ್ನಿಕೊಪ್ಪ ಮತ್ತು ಅಧಿಕಾರಿಗಳ ತಂಡದವರು ಭಾಗಿಯಾಗಿದ್ದರು ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು 5 ಜನ ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ವರದಿ: ಶಿವು ಹುಬ್ಬಳ್ಳಿ .