ಮಂಡ್ಯ ಜಿಲ್ಲೆಯ ಮೈಸೂರು ಬೆಂಗಳೂರು ಹೆದ್ದಾರಿಯ ಬಿಸಿಲು ಮಾರಮ್ಮ ದೇವಸ್ಥಾನದ ಬಳಿ ಈ ದುರ್ಘಟನೆ ನಡೆದಿದೆ.
ತೆಂಗಿನಕಾಯಿ ವ್ಯಾಪಾರ ಮುಗಿಸಿಕೊಂಡು ಸ್ಕೂಟರ್ ನಲ್ಲಿ ಹೋಗುತ್ತಿದ್ದಂತಹ ಸವಾರ ಸತೀಶನ ಮೇಲೆ ಕಾರು ಆಯ್ದಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟಿರುತ್ತಾನೆ. ನಂತರ ಕಾರು ದೇವಸ್ಥಾನದ ಗೋಡೆಗೆ ಡಿಕ್ಕಿ ಹೊಡೆದಿದೆ ಇದರ ಪರಿಣಾಮ ವಾಹನದಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿರುತ್ತಾರೆ.
ಅದೃಷ್ಟ ವಶ ದೇವಸ್ಥಾನದಲ್ಲಿದ್ದ ಭಕ್ತರಿಗೆ ಯಾವುದೇ ರೀತಿಯ ಪ್ರಾಣಪಾಯವಾಗಿಲ್ಲ. ಗಾಯಗೊಂಡವರನ್ನು ಮಂಡ್ಯದ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯ ಬಗ್ಗೆ ಮಂಡ್ಯ ಪಶ್ಚಿಮ ವಿಭಾಗದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.