ಮುಂಡಗೋಡ: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಟಿಬೆಟಿಯನ್ ಕ್ಯಾಂಪ್ ನಂಬರ್ 1 ರಲ್ಲಿ ನಡೆದಿದೆ.
ಯಲ್ಲಾಪುರದಿಂದ ಮುಂಡಗೋಡ ಕಡೆ ಬರುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು,ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸಂಜು ಕಳಲಕೊಂಡ (26) ಸ್ಥಳದಲ್ಲೆ ಮೃತಪಟ್ಟಿದ್ದಾನೆ.
ಮುಂಡಗೋಡ ಪೋಲಿಸರು ತಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವರದಿ: ಮಂಜುನಾಥ ಹರಿಜನ