ಕುಂದಗೋಳ ; ರಾಜ್ಯದಲ್ಲಿ ಅತಿವೃಷ್ಟಿ ಹೆಚ್ಚಾಗಿದ್ದು ರೈತಾಪಿ ಜನರ ಬೆಳೆ ನಾಶ ಆಗಿ ಪರಿಹಾರಕ್ಕಾಗಿ ಅಂಗಲಾಚುತ್ತಿದ್ದಾರೆ. ಆದರೆ ಬಿಜೆಪಿ ಸರಕಾರ ಮಾತ್ರ ತನ್ನ ವೈಫಲ್ಯ ಮುಚ್ಚಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸದಿದೆ ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದರು.
ಅವರು ಕುಂದಗೋಳ ಪಟ್ಟಣದ ಗಾಳೆಮರೆಯಮ್ಮ ದೇವಸ್ಥಾನದಿಂದ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದಿದ್ದನ್ನು ಖಂಡಿಸಿ ಕೈಗೂಂಡ ಬೃಹತ್ ಪ್ರತಿಭಟನಾ ಮೆರವಣಿಗೆ ನೇತೃತ್ವವಹಿಸಿ ಮಾತನಾಡಿ ನಾಳೆ ಸಿದ್ದರಾಮಯ್ಯ ರಾಜ್ಯದಿಂದ ರಾಷ್ಟ್ರ ಮಟ್ಟಕ್ಕೆ ಕಾಲಿಡುತ್ತಿರುವ ನಾಯಕ ಅವರ ಬೆಳವಣಿಗೆ ಕಂಡು ಮುಂದೆ ಎಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬರುತ್ತೆ ಎಂಬ ಭಯದಲ್ಲಿ ಇಂತಹ ಅಹಿತಕರ ಘಟನೆ ನಡೆಸುತ್ತಿದ್ದಾರೆ ಎಂದರು
ಗಾಳಿಮರೇಮ್ಮದೇವಿ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ತಹಶೀಲ್ದಾರ್ ಕಛೇರಿ ತಲುಪಿ ತಹಶೀಲ್ದಾರ್ ಆಶೋಕ ಶಿಗ್ಗಾಂವಿ ಅವರಿಗೆ ಶಾಸಕರ ನೇತೃತ್ವದಲ್ಲಿ ಮೊಟ್ಟೆ ಎಸೆದವರ ವಿರುದ್ದ ಕ್ರಮಕ್ಕೆ ಮನವಿ ಸಲ್ಲಿಸಲಾಯಿತು
ಮನವಿ ಪತ್ರದಲ್ಲಿ ; ಮಾನ್ಯ ಸಿದ್ದರಾಮಯ್ಯ ವಿರುದ್ಧ ಪಕ್ಷದ ನಾಯಕರು ಅವರದೇ ಆದಂತಹ ಗೌರವ ಇದೆ. ಅವರಿಗೆ ಸೂಕ್ತವಾದ ಭದ್ರತೆ ಕಲ್ಪಿಸಿಕೂಡಬೇಕು. ಇತ್ತೀಚೆಗೆ ದಾವಣಗೆರೆಯಲ್ಲಿ ಸಿದ್ದಾರಾಮೋತ್ಸವ ಕಾರ್ಯಕ್ರಮಕ್ಕೆ ಸ್ವಯಂ ಪ್ರೇರಣೆಯಿಂದ ಲಕ್ಷಾಂತರ ಜನಸಾಗರ ಹರಿದು ಬಂದು ಕಾರ್ಯಕ್ರಮದಲ್ಲಿ ಭಾಗ ವಹಿಸಿದ್ದರು. ಬಿಜೆಪಿ ಸರಕಾರ ಸಹಿಸಲಾರದೆ ನೀಚ ಕೃತ್ಯಕ್ಕೆ ಕೈ ಹಾಕಿದ್ದಾರೆ.
ಕೊಡಲೇ ಮೂಟ್ಟೆ ಎಸೆದ ಆರೋಪಿನ ಬಂದಿಸಬೇಕು ಇಂತಹ ಅಹಿತಕರ ಘಟನೆ ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿಬೇಕು ಎಂದು ಬಿಜೆಪಿ ಸರಕಾರ ವಿರುದ್ದ ಹರಿಹಾಯ್ದರು.
ನಂಜನಗೂಡು: ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸಮೀಪ…
ನಂಜನಗೂಡು: ಅಪರಿಚಿತ ಕಾರು ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ…
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಯಿಂದ ಗೊಲಗೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆ ಅಪಘಾತದಲ್ಲಿ ಗೊಲಗೇರಿ ಗ್ರಾಮದ ಯುವಕ…
ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್‌ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಭಟ್ಕಳ ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಅವರು 50,000 ಲಂಚ ಸ್ವೀಕರಿಸುತ್ತಿದ್ದ ವೇಳೆ…
ಗೌರಿಬಿದನೂರು ನಗರದ ವಿನಾಯಕ ನಗರದ ವಾಸಿ ಪದ್ಮ ಜೈನ್ (59) ಎಂಬುವವರ 50 ಗ್ರಾಂ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ…