
ಬಳ್ಳಾರಿ ಜಿಲ್ಲೆಯ ಸಿರುಗುಪ್ಪದಲ್ಲಿ ರಾಜ್ಯವನ್ನೇ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಬಿಜೆಪಿ ಯುವ ಮುಖಂಡ ದೇವು ನಾಯಕ್ (Devu Nayak) ಮೇಲೆ 7 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಸಿರುಗುಪ್ಪ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಪೋಕ್ಸೋ ಪ್ರಕರಣ
- ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಬಿಜೆಪಿ ಮುಖಂಡ ದೇವು ನಾಯಕ್, ಒಬ್ಬ ಮಹಿಳೆ ಸಹಾಯದಿಂದ ಬಾಲಕಿಗೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದಾರೆ.
- ಈ ಸಂಬಂಧ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಪೊಲೀಸರು ದೇವು ನಾಯಕ್ ಅವರನ್ನು ಬಂಧಿಸಿದ್ದಾರೆ.
ಚುನಾವಣೆಗೆ ಸಜ್ಜಾಗುತ್ತಿದ್ದ ಆರೋಪಿಗೆ ಶಾಕ್
- ದೇವು ನಾಯಕ್ ಮುಂಬರುವ ಸ್ಥಳೀಯ ಚುನಾವಣೆಯಲ್ಲಿ ಜಿಲ್ಲಾ ಪಂಚಾಯಿತಿ ಟಿಕೆಟ್ ಆಕಾಂಕ್ಷಿಯಾಗಿದ್ದರು.
- ರಾಜ್ಯ ಹಾಗೂ ರಾಷ್ಟ್ರದ ಬಿಜೆಪಿಯ ನಾಯಕರ ಜೊತೆ ಫೋಟೋ ತೆಗೆಸಿಕೊಂಡು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಆರೋಪಿಯಾಗಿದ್ದಾನೆ.
- ಆದರೆ ಈಗ ಅತ್ಯಾಚಾರ ಪ್ರಕರಣದಿಂದ ಆತನ ಭವಿಷ್ಯ ಕತ್ತಲಾಗುವ ಸಾಧ್ಯತೆ ಇದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.