ಬಸ್ ಹತ್ತುವಂತಹ ಸಂದರ್ಭದಲ್ಲಿ ವಿದ್ಯಾರ್ಥಿನಿ ಕೆಳಗೆ ಬಿದ್ದ ಪರಿಣಾಮ ಬಿಎಂಟಿಸಿ ಬಸ್ ವಿದ್ಯಾರ್ಥಿನಿಯ ಮೇಲೆ ಹರಿದಿತ್ತು. ಈ ಘಟನೆ ಜ್ಞಾನಭಾರತಿ ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ನಡೆದಿದ್ದು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಎಂಟಿಸಿ ಬಸ್ ಚಾಲಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕೋಲಾರ ಮೂಲದ ಶಿಲ್ಪ ಎಂಬ ವಿದ್ಯಾರ್ಥಿನಿ ಸೊಂಟದ ಮೇಲೆ ಬಸ್ ಹರಿದಿದ್ದು ಗಂಭೀರ ಗಾಯಗೊಂಡ ಪರಿಣಾಮ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಾಕಷ್ಟು ವಿದ್ಯಾರ್ಥಿಗಳು ಸೇರಿ ಪ್ರತಿಭಟನೆ ನಡೆಸಿದ್ದಾರೆ. ಘಟನೆ ಸಂಭಂದ ಚಾಲಕ ಸುರೇಶನನ್ನು ಕಾಮಾಕ್ಷಿಪಾಳ್ಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.