ದಾಂಡೇಲಿ: ನಗರದ ಹಳೆ ದಾಂಡೇಲಿ ಸಾರಿಗೆ ಡಿಪೋದಲ್ಲಿ ಬಸ್ಸು ಚಾಲಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ (ಫೆ. 24) ನಡೆದಿದೆ.

ಸಾರಿಗೆ ಘಟಕದ ಸಿಟಿ ಬಸ್ಸು ಚಾಲಕ ಆರ್.ಬಿ. ಗಿಡಜಾಡರ ಅವರು ಫಿನಾಯಿಲ್ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದರು. ಈ ಕುರಿತು ಗಮನಿಸಿದ ಘಟಕದ ಸಹೋದ್ಯೋಗಿಗಳು ತಕ್ಷಣವೇ ಅವಸರವಾಗಿ ಅವರನ್ನು ನಗರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರು.

ತಕ್ಷಣ ಚಿಕಿತ್ಸೆಗೆ ಒಳಪಡಿಸಿದರಿಂದ ಅವರ ಸ್ಥಿತಿ ಸ್ಥಿರವಾಗಿದ್ದು, ಅಗತ್ಯ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಾರಿಗೆ ಘಟಕದ ವ್ಯವಸ್ಥಾಪಕ ಎಲ್.ಎಚ್. ರಾಥೋಡ ಹಾಗೂ ಸಿಬ್ಬಂದಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದು, ಘಟನೆ ಕುರಿತಂತೆ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಆತ್ಮಹತ್ಯೆ ಯತ್ನದ ಹಿಂದಿನ ನಿಜವಾದ ಕಾರಣಗಳ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದು, ಶೀಘ್ರದಲ್ಲಿಯೇ ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ.

Leave a Reply

Your email address will not be published. Required fields are marked *

Related News

error: Content is protected !!