Latest

ಹುಬ್ಬಳ್ಳಿಯಲ್ಲಿ ಅಂಗನವಾಡಿ ಪೌಷ್ಟಿಕ ಆಹಾರ ಅಕ್ರಮ ದಾಸ್ತಾನು ಪ್ರಕರಣ: ಮತ್ತೆ ಆರು ಮಂದಿ ಬಂಧನ

ಹುಬ್ಬಳ್ಳಿಯಲ್ಲಿ ಅಂಗನವಾಡಿ ಮಕ್ಕಳಿಗೆ, ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ನೀಡಬೇಕಾದ ಪೌಷ್ಟಿಕ ಆಹಾರಗಳ ಅಕ್ರಮ ದಾಸ್ತಾನು ಪ್ರಕರಣಕ್ಕೆ ಸಂಬಂಧಿಸಿದಂತೆ ಕಸಬಾ ಠಾಣೆ ಪೊಲೀಸರು ಮತ್ತೆ ಆರು ಮಂದಿಯನ್ನು ಬಂಧಿಸಿದ್ದಾರೆ.

ಬಂಧಿತರು ಸೋನಿಯಾಗಾಂಧಿ ನಗರದ ಅಲ್ತಾಫ್ ಕಲಾದಗಿ, ಕೇಶ್ವಾಪುರದ ಸಲೀಂ ಬೇಪಾರಿ, ಉದಯನಗರದ ಸಲೀಂ ಶೇಖ, ಮೆಹಬೂಬನಗರದ ಸಲೀಂ ಅತ್ತಾರ, ಬಂಕಾಪುರ ಚೌಕದ ದಾಪೀರ್ ಚೌಧರಿ ಹಾಗೂ ಬಸವರಾಜ ವಾಲ್ಮೀಕಿ ಎಂದು ಗುರುತಿಸಲಾಗಿದೆ.

ಈ ಪ್ರಕರಣದ ಪ್ರಮುಖ ಆರೋಪಿ ಬೈತುಲ ಕಿಲ್ಲೆದಾರ ಅವರು ತಲೆಮರೆಸಿಕೊಳ್ಳಲು ಈ ಆರೋಪಿಗಳು ಸಹಾಯ ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಬೈತುಲ ಕಿಲ್ಲೆದಾರ ಮತ್ತು ಫಾರುಕ್ ಶೇಖ್ ದೊಡ್ಡಮನಿ ಕಳೆದ ಒಂದು ವಾರದಿಂದ ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ಪೊಲೀಸರು ಎರಡು ಪ್ರತ್ಯೇಕ ತಂಡಗಳನ್ನು ರಚಿಸಿದ್ದಾರೆ. ಸಿಸಿಬಿ ಹಾಗೂ ಕಸಬಾ ಠಾಣೆ ಪೊಲೀಸರು ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶಕ್ಕೆ ತೆರಳಿ ಶೋಧಕಾರ್ಯ ನಡೆಸುತ್ತಿದ್ದಾರೆ.

ಪೌಷ್ಟಿಕ ಆಹಾರ ಕಳವು ಮತ್ತು ಅಕ್ರಮ ದಾಸ್ತಾನು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದುವರೆದ ತನಿಖೆಯಿಂದ ಮತ್ತಷ್ಟು ಮಾಹಿತಿಗಳು ಲಭ್ಯವಾಗುವ ನಿರೀಕ್ಷೆಯಿದೆ.

nazeer ahamad

Recent Posts

ಶಿಕ್ಷಕಿ ಅಮಾನತು: ಪದ್ಯ ಕಂಠಪಾಠ ಮಾಡಲು ವಿಫಲನಾದ ವಿದ್ಯಾರ್ಥಿಗೆ ಹೊಡೆದ ಆರೋಪ

ಚೆನ್ನೈ: ಮೂರನೇ ತರಗತಿಯ ವಿದ್ಯಾರ್ಥಿಗೆ ಹಿಂದಿ ಪದ್ಯ ಕಂಠಪಾಠ ಮಾಡಲಾಗದ ಕಾರಣ ಹಿನ್ನಲೆಯಲ್ಲಿ ಶಿಕ್ಷಕಿ ದೈಹಿಕ ಶಿಕ್ಷೆ ನೀಡಿದ ಆರೋಪಕ್ಕೆ…

5 hours ago

ಪ್ರಶ್ನೆಗೆ ಉತ್ತರಿಸದ ವಿದ್ಯಾರ್ಥಿಗೆ ಶಿಕ್ಷಕರಿಂದ ಕ್ರೂರ ಹಲ್ಲೆ – ಬಾಲಕನ ಕಾಲು ಮುರಿದ ಘಟನೆ!

ಉತ್ತರಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ನಡೆದ ಅಘಾತಕಾರಿ ಘಟನೆಯೊಂದು ವಿದ್ಯಾರ್ಥಿಗಳ ಸುರಕ್ಷತೆಯ ಕುರಿತು ಗಂಭೀರವಾದ ಪ್ರಶ್ನೆಗಳನ್ನು ಎಬ್ಬಿಸಿದೆ. ವಿದ್ಯಾರ್ಥಿಯೊಬ್ಬನು ಪ್ರಶ್ನೆಗೆ ಉತ್ತರಿಸದ…

5 hours ago

ಶಸ್ತ್ರಚಿಕಿತ್ಸೆಯ ವೇಳೆ ವೈದ್ಯರ ನಿರ್ಲಕ್ಷ್ಯ: ಗರ್ಭಿಣಿಯ ಹೊಟ್ಟೆಯೊಳಗೆ ಬಟ್ಟೆ ಬಿಟ್ಟು ಜೀವಕ್ಕೆ ಅಪಾಯ!

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ವೈದ್ಯರ ನಿರ್ಲಕ್ಷ್ಯದ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಇದರಿಂದ ಅನೇಕರು ತಮ್ಮ ಪ್ರಾಣಕ್ಕೆ ಭಯಪಡುವಂತಾಗಿದೆ. ಸಿಸೇರಿಯನ್ ಶಸ್ತ್ರಚಿಕಿತ್ಸೆಯ…

6 hours ago

ಖಾನಾಪುರದಲ್ಲಿ ಮತ್ತೆ ಕನ್ನಡಿಗರ ಮೇಲೆ ಹಲ್ಲೆ: ಮರಾಠಿ ಯುವಕರ ದಾಳಿಯಿಂದ ಆತಂಕ

ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಮರಾಠಿ ಯುವಕರ ಗೂಂಡಾಗಿರಿ ಮತ್ತೊಮ್ಮೆ ಮರುಕಳಿಸಿದ್ದು, ಕನ್ನಡ ಮಾತನಾಡಿದ ಕಾರಣಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ನಾಯಕನ…

6 hours ago

ಪೊಲೀಸರ ವಶದಲ್ಲಿದ್ದ ಕೊಲೆ ಆರೋಪಿಯ ಅನುಮಾನಾಸ್ಪದ ಸಾವು: ಕುಟುಂಬದವರ ಆಕ್ರೋಶ

ಕಲಬುರಗಿ: ನಗರದ ರೋಜಾ ಠಾಣೆ ವ್ಯಾಪ್ತಿಯಲ್ಲಿ ಘಟಿಸಿದ ಘಟನೆಗೆ ಸಂಬಂಧಿಸಿದಂತೆ ಬಂಧಿತ ಆರೋಪಿ ಪೊಲೀಸರ ವಶದಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದು ಚರ್ಚೆಗೆ…

7 hours ago

ಬೊಮ್ಮನಹಳ್ಳಿ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಕಾನ್ಸ್‌ಟೆಬಲ್…!

ಬೆಂಗಳೂರು: ಬೊಮ್ಮನಹಳ್ಳಿ ಪೊಲೀಸ್ ಠಾಣೆಯ ಕಾನ್ಸ್‌ಟೆಬಲ್ ಅರುಣ್ ಅಪ್ರಾಪ್ತ ಬಾಲಕಿಯನ್ನು ನಂಬಿಸಿ ಅತ್ಯಾಚಾರ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯು…

8 hours ago