ಬಾಗಲಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಬಾಗಲಕೊಟೆ ಇವರ ವತಿಯಿಂದ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಶಿಷ್ಯ ವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಜರುಗಿಸಲಾಯಿತು. ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಮಾತಾನಾಡಿದ ಜಿಲ್ಲಾಧಿಕಾರಿ ಶ್ರೀಮತಿ ಜಾನಕಿ ಕೆ.ಎಮ್ ರವರು ಸುಜ್ಞಾನನಿಧಿ ಶಿಷ್ಯವೇತನ ವಿದ್ಯಾರ್ಥಿಗಳ ಪಾಲಿಗೆ ಆಶಾ ಕಿರಣವಾಗಿದ್ದು, ಈ ಯೋಜನೆ ನೆರವಿನೊಂದಿಗೆ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಜೀವನದಲ್ಲಿ ಉತ್ತಮ ಸಾಧನೆಯನ್ನು ಮಾಡಬೇಕು ಎಂದು ತಿಳಿಸಿದರು.
ನಂತರ 64 ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ, ಶ್ರೀ ವೀರಭದ್ರೇಶ್ವರ ಕಲ್ಯಾಣ ಮಂಟಪ ಕಟ್ಟಡಕ್ಕೆ ರೂ 2.50 ಲಕ್ಷ ಮಂಜೂರಾತಿ ಪತ್ರ, ಸಾಲ ಪಡೆದು ಮರಣ ಹೊಂದಿದ ನಾಮಿನಿಯವರಿಗೆ PRK ಕ್ಲೇಮ್ 4.12 ಲಕ್ಷ, 03 ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರ ನೀಡಿದರು.
ಮುಖ್ಯ ಅತಿಥಿಗಳಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಶ್ರೀ ಶಶಿಧರ ಕುರೇರ ರವರು ಮಾತನಾಡಿದರು.
ಪ್ರಾದೇಶಿಕ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಪ್ರಾದೇಶಿಕ ಕಚೇರಿ ಕೊಪ್ಪಳ ಶ್ರೀ ಚಂದ್ರಶೇಖರ್ ಜೆ ರವರು ಯೋಜನೆಯ ಕಾರ್ಯಕ್ರಮಗಳಲ್ಲಿ ಒಂದಾದ ಸುಜ್ಞಾನನಿಧಿ ಶಿಷ್ಯ ವೇತನದ ಕುರಿತು ಸವಿವರವಾದ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀ ರಾಜಶೇಖರ್ ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಕಾಲೇಜ್ ನವನಗರ ಬಾಗಲಕೋಟೆ, ಶ್ರೀ ಚನ್ನಕೇಶವ ಜಿಲ್ಲಾ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಗೆ ಯೋಜನೆ ಬಿ ಸಿ ಟ್ರಸ್ಟ್ (ರಿ) ಕಚೇರಿ ಬಾಗಲಕೋಟೆ, ಶ್ರೀರಂಗನಗೌಡ ದಂಡನ್ನವರ, ಶ್ರೀಮತಿ ರಾಜ್ಯಶ್ರೀ ಒಂದಕುದುರಿ ಸದಸ್ಯರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ)ಬಾಗಲಕೋಟೆ, ಶ್ರೀ ನಾಗೇಶ್ ವೈ. ಎ ಜನಜಾಗೃತಿ ಯೋಜನಾಧಿಕಾರಿಗಳು ಪ್ರಾದೇಶಿಕಚೇರಿ ಕೊಪ್ಪಳ, ಶ್ರೀ ಬಸವರಾಜ್ ಅಂಗಡಿ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.
ವೃತ್ತಿಪರ ಶಿಕ್ಷಣ ಮಾಡುತ್ತಿರುವ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳು ಮತ್ತು ಪೋಷಕರು ಪಾಲ್ಗೊಂಡಿದ್ದರು. ಕಾರ್ಯಕ್ರದಲ್ಲಿ ಮೆಲ್ವಿಚಾರಕ ಗುರುನಾಥ ಸ್ವಾಗತಿಸಿದರು, ಕೃಷಿ ಮೆಲ್ವಿಚಾರಕ ದ್ಯಾಮಪ್ಪಾ ಗಾಳಿ ವಂದಿಸಿದರು ಜ್ಞಾನ ವಿಕಾಸ ಸಮನ್ವಯಧಿಕಾರಿ ಶ್ರೀಮತಿ ರೇಣುಕಾ, ಸೇವಾಪ್ರತಿನಿಧಿಗಳು ಹಾಜರಿದ್ದರು.
ವರದಿ: ವಿಶ್ವನಾಥ ಭಜಂತ್ರಿ