ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ತಡಬಿಡಿ ಗ್ರಾಮದ ತೃತೀಯ ಲಿಂಗಿ ಲಕ್ಷ್ಮೀ ರಾಯಚೂರಿನಿಂದ ಯಾದಗಿರಿಗೆ ತೆರಳುತ್ತಿದ್ದ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಲಕ್ಷ್ಮೀ ಫ್ರೀ ಟಿಕೆಟ್ ಕೇಳಿದಾಗ ಕಂಡಕ್ಟರ್ ಆಧಾರ್ ಕಾರ್ಡ್ ನೋಡಿ ಕಕ್ಕಾಬಿಕ್ಕಿಯಾಗಿದ್ದಾರೆ.
ಆಧಾರ್ ಕಾರ್ಡ್‌ನಲ್ಲಿ ಲಕ್ಷ್ಮೀ ಎಂಬ ಹೆಸರಿದ್ರೂ ಲಿಂಗದ ಜಾಗದಲ್ಲಿ ಪುರುಷ ಎಂದು ಉಲ್ಲೇಖಿಸಲಾಗಿತ್ತು. ಅದರ ಜತೆಗೆ ಲಕ್ಷ್ಮೀ ಪುರುಷರ ಬಟ್ಟೆ ಹಾಕಿದ್ದರಿಂದ ಗೊಂದಲಕ್ಕೀಡಾದ ಕಂಡಕ್ಟರ್ ಏನು ಮಾಡುವುದು ಎಂದು ತೋಚದೆ ಕಕ್ಕಾಬಿಕ್ಕಿಯಾಗಿದ್ದಾರೆ. ಪುರುಷರ ಬಟ್ಟೆ ಧರಿಸಿ ಬಂದ ತೃತೀಯ ಲಿಂಗಿಗೆ ಟಿಕೆಟ್ ನೀಡಲು ಪರದಾಡಿದ್ದಾರೆ. ರಾಯಚೂರುನಿಂದ ಯಾದಗಿರಿಗೆ ಬರುತ್ತಿದ್ದ ಬಸ್ ನಲ್ಲಿ ಘಟನೆ ನಡೆದಿದೆ.
ಶಹಾಪುರ ತಾಲೂಕಿನ ತಡಬಿಡಿ ಗ್ರಾಮದ ತೃತೀಯ ಲಿಂಗಿ ಎಂದು ಆಧಾರ್ ಕಾರ್ಡ್ ನೋಡಿದ ಕಂಡಕ್ಟರ್, ಹೆಸರು ಲಕ್ಷ್ಮೀ, ಲಿಂಗ ಪುರುಷ ಇದೇನಿದು ಎಂದು ಪ್ರಶ್ನಿಸಿದ ಕಂಡಕ್ಟರ್‌ಗೆ ಸಿಕ್ಕ ಉತ್ತರ ತೃತೀಯ ಲಿಂಗಿ ಎನ್ನೋದು. ನಾನು ಮಹಿಳೆಯರ ಬಟ್ಟೆ ಹಾಕಿಕೊಳ್ಳಲ್ಲ. ಯಾವಾಗಲೂ ಪುರುಷರ ಬಟ್ಟೆನೇ ಧರಿಸುತ್ತೇನೆ ಎಂದು ಹೇಳಿದ್ದು, ಕೊನೆಗೂ ಮನವರಿಕೆ ಮಾಡಿಕೊಂಡ ಕಂಡಕ್ಟರ್ ಶಕ್ತಿ ಯೋಜನೆಯಡಿ ಫ್ರೀ ಟಿಕೆಟ್ ಕೊಟ್ಟು ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.
ನಂಜನಗೂಡು: ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸಮೀಪ…
ನಂಜನಗೂಡು: ಅಪರಿಚಿತ ಕಾರು ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ…
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಯಿಂದ ಗೊಲಗೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆ ಅಪಘಾತದಲ್ಲಿ ಗೊಲಗೇರಿ ಗ್ರಾಮದ ಯುವಕ…
ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್‌ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಭಟ್ಕಳ ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಅವರು 50,000 ಲಂಚ ಸ್ವೀಕರಿಸುತ್ತಿದ್ದ ವೇಳೆ…
ಗೌರಿಬಿದನೂರು ನಗರದ ವಿನಾಯಕ ನಗರದ ವಾಸಿ ಪದ್ಮ ಜೈನ್ (59) ಎಂಬುವವರ 50 ಗ್ರಾಂ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ…