ಮುಂಡಗೋಡ: ದಿನಾಂಕ 11 ರಂದು ಭಾರತೀಯ ಜನತಾ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ, ಬಿಜೆಪಿಯ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ತಾಲೂಕಿನ ಇಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ 200 ಕ್ಕೂ ಹೆಚ್ಚಿನ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು.
ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಕಾರ್ಯಕರ್ತರಿಗೆ ಸಚಿವ ಶಿವರಾಮ್ ಹೆಬ್ಬಾರ್ ಪಕ್ಷದ ಶಾಲು ಹಾಕಿ ಬರಮಾಡಿಕೊಂಡರು.ಈ ವೇಳೆ ಮಾತನಾಡಿದ ಸಚಿವ ಹೆಬ್ಬಾರ್ ಬಿಜೆಪಿ ಪಕ್ಷ ಅಭಿವೃದ್ಧಿ ಪರವಾದ ಪಕ್ಷ, ಎಲ್ಲಾ ವರ್ಗದವರ ಪರವಾಗಿರುವ ಪಕ್ಷ ಹಾಗಾಗಿ ಪಕ್ಷಕ್ಕೆ ಸೇರುವವರ ಸಂಖ್ಯೆ ಹೆಚ್ಚಾಗುತ್ತಿದೆ ಇದು ಇಲ್ಲಿಗೆ ನಿಲ್ಲಲ್ಲ ಈಗ ಪ್ರಾರಂಭವಾಗಿದೆ ಎಂದರು.
ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಎಲ್ ಟಿ ಪಾಟೀಲ್, ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಯ ಅಧ್ಯಕ್ಷರಾದ ರವಿಗೌಡ ಪಾಟೀಲ್, ನಿಕಟಪೂರ್ವ ಮಂಡಲ ಅಧ್ಯಕ್ಷ ಗುಡ್ಡಪ್ಪ ಕಾತೂರ ಮಾತನಾಡಿದರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ನಾಗಭೂಷಣ ಹಾವಣಗಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಕೆಸಿ ಗಲಬಿ, ಸಿದ್ದು ಹಡಪದ, ರಾಮಣ್ಣ ಲಮಾಣಿ, ಸಂತೋಷ್ ತಳವಾರ, ಮಂಜುನಾಥ ಕಟಗಿ, ಬಸಯ್ಯ ನಡುವಿನಮನಿ, ರಾಜು ಗುಬ್ಬಕ್ಕನವರ, ಮಂಜುನಾಥ ನಡಗೇರ ಸೇರಿದಂತೆ ಸ್ಥಳೀಯ ಕಾರ್ಯಕರ್ತರು ಮುಖಂಡರು ಹಾಜರಿದ್ದರು.
ವರದಿ :ಮಂಜುನಾಥ ಹರಿಜನ