Latest

ವಿಜಯಪುರದಲ್ಲಿ ನಕಲಿ ತುಪ್ಪುದ ಜಾಲ ಪತ್ತೆ

ನಕಲಿ ತುಪ್ಪದ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿದ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರ ಆಧಿಕಾರಿಗಳು ಓರ್ವನ ಸಹಿತ 30 ಕೆ.ಜಿ.ಗೂ ಅಧಿಕ ನಕಲಿ ತುಪ್ಪವನ್ನು ವಶಕ್ಕೆ ಪಡೆದಿದ್ದಾರೆ.
ರವಿ ನಿಂಗನಗೌಡ ಬಿರಾದಾರ ಹಾಗೂ ಇನ್ನಿತರರು ಸೇರಿಕೊಂಡು ನಕಲಿ ತುಪ್ಪು ಮಾರಾಟ ಮಾಡುತ್ತಿದ್ದರು. ಬೆಂಗಳೂರಿನಿಂದ ಖಾಸಗಿ ಬಸ್ ಮೂಲಕ ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ನಕಲಿ ತುಪ್ಪ ಬಾಟಲ್, ಸ್ಟಿಕರ್ ಸೇರಿದಂತೆ ಪ್ಯಾಕಿಂಗ್ ಮಟೀರಿಯಲ್ ಹಾಗೂ ಬಿಲ್ ಬುಕ್​ಗಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ರವಿಯನ್ನು ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ. ಸದ್ಯ ವಶಕ್ಕೆ ಪಡೆದ ನಕಲಿ ತುಪ್ಪವನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳಿಸಿದ ಅಧಿಕಾರಿಗಳು, ಪ್ರಯೋಗಾಲಯದ ವರದಿ ಬಂದ ಬಳಿಕ ಮುಂದಿನ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago