ಚಿತ್ರದುರ್ಗ:- ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಭೂತಪೂರ್ವ ವಿಜಯ ಸಾಧಿಸಿದೆ. ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ಶುರುವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇವರ ನಡುವೆ ಮುಖ್ಯಮಂತ್ರಿ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಯುತ್ತಿದೆ.ಇತ್ತ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಲ್ಲೂ ದಲಿತ ಪರ ಸಂಘಟನೆಗಳು ಹಾಗೂ ವಿವಿಧ ಮಠಾಧೀಶರುಗಳು ಈ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಸ್ವಾಂತಂತ್ರ್ಯ ಬಂದು ಇಲ್ಲಿಯ ತನಕ ಅಧಿಕಾರದಲ್ಲಿ ಇದ್ರೂನು ಇದುವರೆಗೆ ದಲಿತರಿಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡಿಲ್ಲ ಹಾಗಾಗಿ ಈ ಬಾರಿ ರಾಜ್ಯದಲ್ಲಿ ದಲಿತರಿಗೆ ಅದರಲ್ಲಿ ಡಾ.ಜಿ.ಪರಮೇಶ್ವರ್ ಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡಬೇಕೆಂದು ನಗರದ ಪೊಲೀಸ್ ಸ್ಟೇಷನ್ ಮುಂಭಾಗದ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ದಲಿತ ಸಮಾಜದ ಮುಖಂಡರು ಒತ್ತಾಯಿಸುತ್ತಿದ್ದಾರೆ.
ಡಾ. ಜಿ ಪರಮೇಶ್ವರ್ ಅವರಿಗೆ ಪರಿಶಿಷ್ಟರ ಕೋಟಾದಡಿಯಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ನೀಡಬೇಕು ಎನ್ನುವುದಕ್ಕಿಂತ ಅವರಿಗೆ ಮುಖ್ಯಮಂತ್ರಿ ಆಗುವ ಎಲ್ಲಾ ಅರ್ಹತೆಗಳು ಇದಾವೆ ಎಂದು ಒತ್ತಾಯಿಸುತ್ತಿದ್ದಾರೆ.
ಜಿ.ಪರಮೇಶ್ವರ್ ಅವರು ಕಾನೂನು,ಸಂವಿಧಾನ,ಹಾಗೂ ಜನಪರ ಕಾಳಜಿ ಇದ್ದವರು.ಅವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ಫ್ರೂಟ್ ಫುಲ್ ನಾಯಕರು ಅವರನ್ನು ಮುಖ್ಯಮಂತ್ರಿ ಮಾಡುವ ನಿಟ್ಟಿನಲ್ಲಿ ಸಿ ಎಲ್ ಪಿ ಸಭೆಯಲ್ಲಿ ವರಿಷ್ಠರು ನಿರ್ಧಾರ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.