ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬೊಡನಾಯಕದಿನ್ನಿ ಗ್ರಾಮದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ,ಗ್ರಾಮ ಪಂಚಾಯತಿ ಹಾಗೂ ಆರೋಗ್ಯ ಇಲಾಖೆಯ ವತಿಯಿಂದ ಡೆಂಗ್ಯೂವಿನ ಬಗ್ಗೆ ಜನ ಜಾಗೃತಿ ಜಾಥ ಕಾರ್ಯಕ್ರಮ ನಡೆಸಲಾಯಿತು.
ಜಾಥಾದ ಘೋಷಣೆ ” ಡೆಂಗ್ಯೂ ತಡೆಗಟ್ಟುವಿಕೆ ಮನೆಯಿಂದಲೇ ಪ್ರಾರಂಭ ” ಹಾಗೂ “ಸೊಳ್ಳೆ ಕಡಿತದಿಂದ ದೂರಾಗಿ ಡೆಂಗ್ಯೂ ಚಿಕನಗುನ್ಯ, ಮಲೇರಿಯಾ ದಿಂದ ಪಾರಾಗಿ” ಎಂಬ ಘೋಷಣೆಯೊಂದಿಗೆ ಗ್ರಾಮದ ಬೀದಿಬೀದಿಗಳಲ್ಲಿ ಶಾಲಾ ವಿದ್ಯಾರ್ಥಿಗಳ ಮುಖಾಂತರ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಪಿಡಿಓ ಅರ್ಚನಾ ಕುಲಕರ್ಣಿ, ಸಿದ್ದು ಗಣಿ ಆರೋಗ್ಯ ನಿರೀಕ್ಷಣಾಧಿಕಾರಿ, ಪ್ರವೀಣ ಕಳಸಾ ಸಮುದಾಯ ಆರೋಗ್ಯ ಅಧಿಕಾರಿ ಬೊಡನಾಯಕದಿನ್ನಿ, ರೇಖಾ ಪಾಟೀಲ್ ಹಾಗೂ ಗ್ರಾಮ ಪಂಚಾಯತಿ ಕಾರ್ಯದರ್ಶಿ ನಾಗಪ್ಪ ಗೌಡರ ಹಾಗೂ ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಹಾಜರಿದ್ದರು.
ವರದಿ:ಸಂಗಪ್ಪ ಚಲವಾದಿ