ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಮಠ ಮತ್ತು ಎದ್ದೇಳು ಮಂಜುನಾಥ ಹಂತಹ ವಿಭಿನ್ನ ಸಿನಿಮಾಗಳನ್ನು ನೀಡಿದ್ದ ಹಿರಿಯ ನಿರ್ದೇಶಕ, ನಟ, ಬರಹಗಾರ ಮತ್ತು ನಿರ್ಮಾಪಕ ಗುರುಪ್ರಸಾದ್ (52) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಮೃತದೇಹ ಬೆಂಗಳೂರಿನ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಈ ದುರ್ಘಟನೆಗೆ ಸಂಬಂಧಿಸಿದಂತೆ ಒಂದು ಆಡಿಯೋ ಕ್ಲಿಪ್ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಅದರಲ್ಲಿ ಅವರು ಪತ್ನಿಯೊಂದಿಗೆ ಫೋನ್ ಕರೆ ವೇಳೆ ಆತ್ಮಹತ್ಯೆ ಕುರಿತ ಮಾತುಗಳನ್ನು ಆಡಿರುವುದು ಕೇಳಿ ಬರುತ್ತದೆ. ವರದಿ ಪ್ರಕಾರ, ಅವರು ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಸಂದರ್ಭದಲ್ಲಿ, “ನಿನಗೂ ಮಗಳಿಗೆ ಒಂದು ದುಡ್ಡು ಮಾಡಿ ಸತ್ತು ಹೋಗಿಬಿಡುತ್ತೇನೆ” ಎಂದಿದ್ದರು. ಈ ವಾಕ್ಯವನ್ನು ಅವರು ಪದೇ ಪದೇ ಉಲ್ಲೇಖಿಸಿರುವುದು ಆಡಿಯೋದಲ್ಲಿ ಸ್ಪಷ್ಟವಾಗಿದೆ.

ಈ ಫೋನ್ ಸಂಭಾಷಣೆಯನ್ನು ಸ್ವತಃ ಗುರುಪ್ರಸಾದ್‌ ಅವರು ರೆಕಾರ್ಡ್ ಮಾಡಿ ಅವರ ಆಪ್ತರಿಗೆ ಕಳುಹಿಸಿದ್ದರೆಂಬ ಮಾಹಿತಿ ಹೊರಬಿದ್ದಿದೆ. ಅವರ ನಿಧನದ ನಂತರ ಈ ಆಡಿಯೋ ಲಭ್ಯವಾಗಿದ್ದು, ಅದೀಗ ವೈರಲ್ ಆಗಿದೆ.

ಆತ್ಮಹತ್ಯೆಯ ಹಿಂದಿನ ಕಾರಣ ಏನು?

ಗುರುಪ್ರಸಾದ್ ಅವರ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಅವರ ವೈಯಕ್ತಿಕ ಜೀವನ ಮತ್ತು ಆರ್ಥಿಕ ಸಮಸ್ಯೆಗಳ ನಡುವಣ ಒತ್ತಡವೇ ಇದಕ್ಕೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಪೋಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ. ಕುಟುಂಬದ ಸದಸ್ಯರ ಹೇಳಿಕೆ, ಆಡಿಯೋ ಮತ್ತು ಇತರ ಸಾಕ್ಷ್ಯಾಧಾರಗಳನ್ನೂ ಪರಿಶೀಲಿಸಲಾಗುತ್ತಿದೆ.

ಕನ್ನಡ ಚಿತ್ರರಂಗದಲ್ಲಿ ಗುರುಪ್ರಸಾದ್ ಅವರು ವಿಭಿನ್ನ ಶೈಲಿಯ ಸಿನಿಮಾಗಳನ್ನು ನೀಡಿದ ವ್ಯಕ್ತಿಯಾಗಿದ್ದರು. ಅವರ ನಿಧನವು ಚಿತ್ರರಂಗಕ್ಕೆ ದೊಡ್ಡ ಹೊಡೆತ ನೀಡಿದ್ದು, ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!