3.0 ಸರ್ಕಾರದ ಮೊದಲ ಬಜೆಟ್ ಮಂಡನೆ. ಉದ್ಯೋಗ ಸೃಷ್ಟಿ, ತೆರಿಗೆ ಕಡಿತ, ಆದಾಯ ತೆರಿಗೆ ನೀತಿಯಲ್ಲಿ ಬದಲಾವಣೆ, ಕೃಷಿ ಜೊತೆಗೆ ಕೆಲ ಹೊಸ ಯೋಜನೆಗಳ ಘೋಷಣೆ ಮಾಡಲಾಗಿದೆ. ಅದರಲ್ಲೂ ಪ್ರಮುಖವಾಗಿ ಬಂಡವಾಳ ಹೂಡಿಕೆಯ ಲಾಭ ಮೇಲಿನ ತೆರಿಗೆಯಿಂದ ಹೂಡಿಕೆದಾರರು ನಿರಾಸೆಗೊಂಡಿದ್ದಾರೆ.
ಪ್ರಮುಖವಾಗಿ ಬಂಡವಾಳ ಹೂಡಿಕೆಯ ಲಾಭದ ಮೇಲೆ ತೆರಿಗೆಯನ್ನು ಏರಿಕೆ ಮಾಡಲಾಗಿದೆ. ಶೇಕಡಾ 10 ರಿಂದ ಶೇಕಡಾ 12ಕ್ಕೆ ತೆರಿಗೆ ಹೆಚ್ಚಳ ಮಾಡಲಾಗಿದೆ. ಬಂಡವಾಳ ಹೂಡಿಕೆಯ ಲಾಭದ ತೆರಿಗೆ ಹೆಚ್ಚಳದಿಂದ ಹೂಡಿಕೆದಾರರಿಗೆ ತೀವ್ರ ಹೊಡೆತ ಬಿದ್ದಿದೆ. ಈ ಘೋಷಣೆ ಹೊರಬೀಳುತ್ತಿದ್ದಂತೆ ಭಾರತದ ಷೇರುಮಾರುಕಟ್ಟೆ ಕುಸಿತ ಕಂಡಿದೆ. ಸೆನ್ಸೆಕ್ಸ್ 1,200 ಅಂಕ ಕುಸಿತ ಕಂಡರೆ, ನಿಫ್ಠಿ 350 ಅಂಕ ಕುಸಿತ ಕಂಡಿದೆ.
ಒಂದೆಡೆ ಭಾರತದಲ್ಲಿ ಬಜೆಟ್ ಮಂಡನೆಯಲ್ಲಿ ಹೂಡಿಕೆ ಲಾಭದ ಮೇಲಿನ ತೆರಿಗೆ ಹೆಚ್ಚಳದ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಕುಸಿತ ಕಂಡರೆ, ಇತ್ತ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಕುಸಿತ ಕಂಡಿದೆ. ಪ್ರಮುಖವಾಗಿ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿ ಸ್ಥಾನದಿಂದ ಜೋ ಬೈಡೆನ್ ಹಿಂದೆ ಸರಿಯುತ್ತಿದ್ದಂತೆ ಅಂತಾರಾಷ್ಟ್ರೀಯ ಷೇರು ಮಾರುಕಟ್ಟೆಯಲ್ಲಿ ತಲ್ಲಣವಾಗಿದೆ. ಬಜೆಟ್ ಮಂಡನೆ ಬೆನ್ನಲ್ಲೇ ಕುಸಿತ ಕಂಡಿದ್ದ ಷೇರು ಮಾರುಕಟ್ಟೆ ನಿಧಾನವಾಗಿ ಚೇತರಿಕೆ ಕಾಣುತ್ತಿದೆ.
ಈ ಬಾರಿ ಮೈತ್ರಿ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚಿಸಿದೆ ಕಳೆದೆರಡು ಅವಧಿಯ ಬಜೆಟ್‌ಗಿಂತ ಈ ಬಾರಿಯ ಬಜೆಟ್ ಮೋದಿ ಸರ್ಕಾರಕ್ಕೆ ಹೆಚ್ಚು ಸವಾಲಾಗಿತ್ತು. ಬೆಂಬಲ ನೀಡಿದ ಆಂಧ್ರ ಪ್ರದೇಶ ಹಾಗೂ ಬಿಹಾರಕ್ಕೆ ಬಂಪರ್ ಘೋಷಣೆ ಮಾಡಲಾಗಿದೆ. ನಿರ್ಮಲಾ ಸೀತಾರಾಮನ್ ಇಂದು 7ನೇ ಬಾರಿಗೆ ಬಜೆಟ್ ಮಂಡಿಸಿ ದಾಖಲೆ ಬರೆದಿದ್ದಾರೆ. ಮೋದಿ 3.0 ಸರ್ಕಾರದ ಮೊದಲ ಬಜೆಟ್ ಇದಾಗಿದೆ.
ನಂಜನಗೂಡು: ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸಮೀಪ…
ನಂಜನಗೂಡು: ಅಪರಿಚಿತ ಕಾರು ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ…
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಯಿಂದ ಗೊಲಗೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆ ಅಪಘಾತದಲ್ಲಿ ಗೊಲಗೇರಿ ಗ್ರಾಮದ ಯುವಕ…
ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್‌ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಭಟ್ಕಳ ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಅವರು 50,000 ಲಂಚ ಸ್ವೀಕರಿಸುತ್ತಿದ್ದ ವೇಳೆ…
ಗೌರಿಬಿದನೂರು ನಗರದ ವಿನಾಯಕ ನಗರದ ವಾಸಿ ಪದ್ಮ ಜೈನ್ (59) ಎಂಬುವವರ 50 ಗ್ರಾಂ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ…