ಮುಂಡಗೋಡ: ಇಂದು ಪಟ್ಟಣದ ಲೋಯಲಾ ವಿಕಾಸ ಕೇಂದ್ರದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಸ್ಪರ್ಧೆ ನಡೆಯಿತು.
ಪ್ರೌಢಶಾಲಾ ವಿಭಾಗದ ಛದ್ಮವೇಷ ಸ್ಪರ್ಧೆಯಲ್ಲಿ ತಾಲೂಕಿನ ಚಿಗಳ್ಳಿ ಗ್ರಾಮದ ಶ್ರೀಮತಿ ದೇವಕ್ಕ ಛಾಯಪ್ಪ ಕಲಾಲ ಸರಕಾರಿ ಪ್ರೌಢಶಾಲೆ ಚಿಗಳ್ಳಿಯ 10ನೇ ತರಗತಿಯ ವಿದ್ಯಾರ್ಥಿನಿ ಕು.ದೀಕ್ಷಾ ಆಲದಕಟ್ಟಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಈ ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.
ವರದಿ :ಮಂಜುನಾಥ ಹರಿಜನ