ಮುಂಡಗೋಡ :ತಾಲೂಕಿನ ಲೋಯಲ ವಿಕಾಸ ಕೇಂದ್ರದಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಿರಿಯರ ವಿಭಾಗದ ಕಥೆ ಹೇಳುವ ಸ್ಪರ್ಧೆಯಲ್ಲಿ ಕು.ಲಾವಣ್ಯ ಹಿರೇಮಠ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಈ ವಿದ್ಯಾರ್ಥಿನಿಯು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಚಿಗಳ್ಳಿಯಲ್ಲಿ ಅಧ್ಯಯನ ಮಾಡುತ್ತಿದ್ದು ವಿದ್ಯಾರ್ಥಿನಿಯ ಸಾಧನೆಗೆ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.
ವರದಿ: ಮಂಜುನಾಥ ಹರಿಜನ