ನಗರದ ಶಾಂತಿನಿಕೇತನ ಕಾಲೋನಿಯ ಲಲಿತಾ ಎಂಬ ಮಹಿಳೆ ಜೀವನಾಂಶಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದ ವೇಳೆ, ಪತಿ ಕಳೆದ ವರ್ಷವೇ ವಿಚ್ಛೇದನ ಪಡೆದಿದ್ದಾನೆ ಎಂಬ ವಿಚಾರ ತಿಳಿದು ಆಕ್ರೋಶಗೊಂಡು, ಕೋರ್ಟ್ ಆವರಣದಲ್ಲೇ ಸಹೋದರಿಯೊಂದಿಗೆ ಸೇರಿ ಪತಿಗೆ ಥಳಿಸಿದ ಘಟನೆ ಸೋಮವಾರ ನಡೆದಿದೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಲಲಿತಾ ವಾಯವ್ಯ ಸಾರಿಗೆ ಸಂಸ್ಥೆಯ ನೌಕರನಾದ ಬೆಳಗಾವಿ ಜಿಲ್ಲೆ ರಾಮದುರ್ಗದ ಕುಮಾರನ ವಿರುದ್ಧ ಜೀವನಾಂಶಕ್ಕಾಗಿ ಕಾನೂನು ಹೋರಾಟ ನಡೆಸುತ್ತಿದ್ದರು. ಆದರೆ, ನ್ಯಾಯಾಲಯದಲ್ಲಿ ಹಾಜರಾಗಿದ್ದಾಗ, ಕುಮಾರ ಕಳೆದ ವರ್ಷ ಜೂನ್ ತಿಂಗಳಲ್ಲೇ ರಾಮದುರ್ಗ ಕೋರ್ಟ್‌ನಲ್ಲಿ ವಿಚ್ಛೇದನ ಪಡೆದಿರುವುದು ತಿಳಿದುಬಂದಿತು. ಈ ವಿಷಯ ತಿಳಿದ ಲಲಿತಾ, ವಿಚ್ಛೇದನಕ್ಕಾಗಿ ತನ್ನ ನಕಲಿ ಸಹಿಯನ್ನು ಬಳಸಲಾಗಿದೆ ಎಂದು ಆರೋಪಿಸಿ, ತೀವ್ರ ಸಿಟ್ಟಿಗೆದ್ದರು.
ಆಕ್ರೋಶದಲ್ಲಿ, ತಮ್ಮ ಸಹೋದರಿಯೊಂದಿಗೆ ಸೇರಿ ಪತಿಗೆ ಹಲ್ಲೆ ನಡೆಸಿದರು. ಈ ಸಂದರ್ಭ ಅಲ್ಲಿದ್ದ ವಕೀಲರು ಹಾಗೂ ಸಾರ್ವಜನಿಕರು ಮಧ್ಯಪ್ರವೇಶಿಸಿ, ಕುಮಾರನನ್ನು ಮಹಿಳೆಯರಿಂದ ಬಿಡಿಸಿ ಕಳುಹಿಸಿದರು. ಘಟನೆಯ ವಿಡಿಯೋ ಅಲ್ಲಿದ್ದ ಸ್ಥಳೀಯರು ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದು, ಅದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಬ್ಬುತ್ತಿದೆ.
ಚೆನ್ನೈನ ಐಯ್ಯಪ್ಪಂತಂಗಲ್‌ನಲ್ಲಿರುವ ಐಷಾರಾಮಿ ಅಪಾರ್ಟ್‌ಮೆಂಟ್ ಸಂಕೀರ್ಣವೊಂದು ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಖ್ಯಾತ ಚಲನಚಿತ್ರ ನಿರ್ದೇಶಕ ರಾಜು ಮುರುಗನ್ ಅವರ…
ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗದಗ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 23 ಮಂದಿಯನ್ನು…
ಹಂಪಿ ಮತ್ತು ಆನೆಗೊಂದಿ ಪ್ರದೇಶದಲ್ಲಿ ವಿದೇಶಿ ಪ್ರವಾಸಿಗರ ಮೇಲೆ ಹಲ್ಲೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ನಡೆದ ಬಳಿಕ, ಈ…
ರಷ್ಯಾ-ಉಕ್ರೇನ್ ಯುದ್ಧ ತೀವ್ರಗೊಳ್ಳುತ್ತಲೇ ಇದ್ದು, ಉಕ್ರೇನ್ ರಷ್ಯಾದ ರಾಜಧಾನಿ ಮಾಸ್ಕೋವಿನ ವಿರುದ್ಧ ಭಾರೀ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯಲ್ಲಿ…
ಉತ್ತರ ಪ್ರದೇಶದ ಕಾನ್ಪುರದಲ್ಲಿ 17 ವರ್ಷದ ಯುವತಿಯನ್ನು ಕತ್ತು ಸೀಳಿ ಕೊಲೆ ಮಾಡಿರುವ ಭೀಕರ ಘಟನೆ ಸೋಮವಾರ (ಮಾರ್ಚ್ 10)…
ತೆಲಂಗಾಣದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದ ದಂಪತಿಯೊಬ್ಬರು ತಮ್ಮ ಇಬ್ಬರು ಮಕ್ಕಳನ್ನು ಕೊಂದು, ನಂತರ ನೇಣು…