ಕಾರವಾರ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಕಳ್ಳರು ಬಂದಿರುತ್ತಾರೆ ಎಂಬ ಸುಳ್ಳು ವದಂತಿಗಳು ಹರಿದಾಡುತ್ತಿದ್ದು ಈ ವಿಷಯಕ್ಕೆ ಸಂಬಂಧಿಸಿದಂತೆ ಬೇರೆ ದೇಶದ,ರಾಜ್ಯದ ವಿಡಿಯೋಗಳನ್ನು ಬಿತ್ತರಿಸಲಾಗುತ್ತಿದೆ.ಇದರಿಂದ ಜನರು ಆತಂಕಗೊಂಡು ಭಯಗೊಂಡು ಅಪರಿಚಿತ ಅಮಾಯಕ ವ್ಯಕ್ತಿಗಳನ್ನು ತಡೆದು/ ಹಿಡಿದು ಅವರ ಮೇಲೆ ಹಲ್ಲೆ ಮಾಡುವ ಘಟನೆಗಳು ಜರುಗುತ್ತಿವೆ.
ಹಾಗಾಗಿ ಸಾರ್ವಜನಿಕರು ತಮ್ಮ ತಮ್ಮ ಗ್ರಾಮ ,ಶಹರ,ಪಟ್ಟಣ ,ಹಳ್ಳಿಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಶಯಾಸ್ಪದ ವ್ಯಕ್ತಿಗಳು ಅಥವಾ ಅಪರಿಚಿತರು ಕಂಡುಬಂದಲ್ಲಿ ತಕ್ಷಣ ಉಚಿತ 112 ಸಹಾಯವಾಣಿಗೆ ಕರೆ ಮಾಡಿ ತಿಳಿಸಬೇಕು ತಕ್ಷಣವೇ ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಕೂಲಂಕುಶವಾಗಿ ವಿಚಾರಣೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವರು .
ಸಾರ್ವಜನಿಕರು ಆತಂಕಗೊಂಡು ಯಾವುದೇ ಕಾರಣಕ್ಕೂ ಅಮಾಯಕ ವ್ಯಕ್ತಿಗಳಿಗೆ ತಡೆಯೊಡ್ಡುವುದಾಗಲಿ, ಹಲ್ಲೆ ಮಾಡುವುದಾಗಲಿ, ಅವರಿಗೆ ತೊಂದರೆ ಕೊಡುವುದಾಗಲಿ ಮಾಡಿದ್ದಲ್ಲಿ ಅಂತವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು.
ಸಣ್ಣ ಮಕ್ಕಳ ಕಳ್ಳತನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯನ್ನು ಹರಡುವವರ ವಿರುದ್ಧ ಕಾನೂನು ಅಡಿಯಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೆಕರ್ ತಿಳಿಸಿದ್ದಾರೆ.
ವರದಿ :ಮಂಜುನಾಥ ಹರಿಜನ
ನಂಜನಗೂಡು: ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸಮೀಪ…
ನಂಜನಗೂಡು: ಅಪರಿಚಿತ ಕಾರು ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ…
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಯಿಂದ ಗೊಲಗೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆ ಅಪಘಾತದಲ್ಲಿ ಗೊಲಗೇರಿ ಗ್ರಾಮದ ಯುವಕ…
ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್‌ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಭಟ್ಕಳ ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಅವರು 50,000 ಲಂಚ ಸ್ವೀಕರಿಸುತ್ತಿದ್ದ ವೇಳೆ…
ಗೌರಿಬಿದನೂರು ನಗರದ ವಿನಾಯಕ ನಗರದ ವಾಸಿ ಪದ್ಮ ಜೈನ್ (59) ಎಂಬುವವರ 50 ಗ್ರಾಂ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ…