ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್‌ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ ದೊಡ್ಡ ಮಟ್ಟದಲ್ಲಿ ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಮುಂದಾಗಿದ್ದು, ನಂಜನಗೂಡು ತಾಲೂಕಿನಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಅವ್ಯವಹಾರ ನಡೆಯುವ ಕೇಂದ್ರ ಸ್ಥಾನವಾಗಿದೆ ನಂಜನಗೂಡು ನಗರಸಭೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.
ಮಾಜಿ ಶಾಸಕ ಹರ್ಷವರ್ಧನ್ ರವರು ಭಾಗವಹಿಸಿದ್ದ ನಗರಸಭೆಯ ಬಿಜೆಪಿ ಸದಸ್ಯರು ಹಾಗೂ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ಕಾರ್ಯಕ್ರಮವನ್ನು ಆಯೋಜನೆ ಮಾಡಿ, ಖಾಲಿ ಬಿಂದಿಗೆಗಳನ್ನು ಪ್ರದರ್ಶನ ಮಾಡುವ ಮೂಲಕ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಗರಸಭೆಯಲ್ಲಿ ಕುಡಿಯುವ ನೀರಿನ ಬಿಲ್ ದುಬಾರಿಯಾಗಿದ್ದು ೬೦ ರಿಂದ ೮೦ ಸಾವಿರದಷ್ಟು ಕುಡಿಯುವ ನೀರಿನ ಬಿಲ್ ಬರುತ್ತಿದೆ. ಹಾಗಾಗಿ ಇದೆಲ್ಲ ಸರಿಪಡಿಸುವ ತನಕ ಯಾರು ಕೂಡ ಕುಡಿಯುವ ನೀರಿನ ಬಿಲ್ ಕಟ್ಟಬಾರದು ಎಂದು ಕರೆ ನೀಡಿದರು.
ಶಾಸಕರು ಆಯ್ಕೆಯಾಗಿ ಒಂದುವರೆ ವರ್ಷ ಕಳೆದಿದೆ ಆಯ್ಕೆಯಾದ ಸಂದರ್ಭ ನಗರಸಭೆಯ ಮೊದಲ ಸಭೆಯಲ್ಲಿಯೇ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದಾಗಿ ಕೇವಲ ಮಾತಿನಲ್ಲಿ ಚಾಟಿ ಬೀಸಿದ್ದರು ಆದರೆ ಈಗ ಅದು ಮರೆಯಾಗಿದೆ ನಂಜನಗೂಡು ಕ್ಷೇತ್ರದಲ್ಲಿ ನಿರಂತರವಾಗಿ ಕಳೆದ ಒಂದುವರೆ ವರ್ಷಗಳಿಂದ ಸರ್ಕಾರಿ ಅಧಿಕಾರಿಗಳಿಂದ ಭ್ರಷ್ಟಾಚಾರ ನಡೆಯುತ್ತಿದೆ. ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಸಮಸ್ಯೆ ಎದುರಾಗಿದೆ, ನನ್ನ ಅಧಿಕಾರ ಅವಧಿಯಲ್ಲಿ ಕೆಲವು ಅನಧಿಕೃತ ಬಡಾವಣೆಗಳಿಗೆ ಮುಂದಾಗಿದ್ದAತಹ ಸಂದರ್ಭದಲ್ಲಿ ಲೋಪ ದೋಷ ಕಂಡು ಬಂದ ಕೂಡಲೇ ಅವುಗಳಿಗೆ ಕಡಿವಾಣ ಹಾಕಲಾಗುತ್ತಿತ್ತು. ಆದರೆ ಇಂದಿನ ಶಾಸಕರ ಅವಧಿಯಲ್ಲಿ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ ಉತ್ತೇಜಿಸಲಾಗುತ್ತಿದೆ. ಎಂದು ಆರೋಪಿಸಿ ಪ್ರತಿಭಟನೆ ಸಂದರ್ಭದಲ್ಲಿ ಮಾಜಿ ಶಾಸಕ ಹರ್ಷವರ್ಧನ್ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.
ನಗರಸಭೆ ಸದಸ್ಯ ಕಪಿಲೇಶ್ ಮಾತನಾಡಿ, ಅಧಿಕಾರಿಗಳ ದುರಾಡಳಿತದ ಬಗ್ಗೆ ನಂಜನಗೂಡು ನಾಗರೀಕರು ಈಗಾಗಲೇ ರೊಚ್ಚಿಗೆದ್ದಿದ್ದಾರೆ, ಕೂಡಲೆ ಎಚ್ಚೆತ್ತು ಯದ್ವಾ-ತದ್ವಾ ಕುಡಿಯುವ ನೀರಿಗೆ ನೀಡುತ್ತಿರುವ ಬಿಲ್ಲುಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲು ಮುಂದಾಗಬೇಕು, ತುರ್ತಾಗಿ ನಾವು ನೀಡಿರುವ ಹಲವು ಬೇಡಿಕೆಗಳನ್ನು ಈಡೇರಿಸಿದಿದ್ದಲ್ಲಿ ಮುಂದಿನ ದಿನಗಳಲ್ಲಿ ನಗರಸಭೆಯ ಗೇಟ್‌ಗೆ ಬೀಗ ಜಡಿದು ಪ್ರತಿಭಟನೆಯನ್ನು ಇನ್ನಷ್ಟು ಚುರುಕುಗೊಳಿಸಲು ಮುಂದಾಗ ಬೇಕಾಗುತ್ತದೆ ಎಂದು ಎಚ್ಚರಿಸಿದರು . ಬಳಿಕ ನಗರಸಭೆ ಆಯುಕ್ತರಿಗೆ ಪ್ರತಿಭಟನಾಕಾರರು ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡ ಚಿಕ್ಕರಂಗನಾಯ್ಕ, ನಗರಸಭೆಯ ಸದಸ್ಯರುಗಳಾದ ಕಪಿಲೇಶ್, ಮಹೇಶ್ ಅತ್ತಿಖಾನೆ, ಎಸ್.ಸಿದ್ದರಾಜು, ಮಹದೇವಮ್ಮ ಮಹದೇವಪ್ರಸಾದ್, ಮುಖಂಡರುಗಳಾದ ಬಾಲಚಂದ್ರು, ಚಂದ್ರಶೇಖರ್, ನಾಗರಾಜು ಶಶಿಕಲಾ, ಗಾಯತ್ರಿ, ಸಂಜಯ್, ಉಮೇಶ್(ಮೋದಿ), ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಮತ್ತು ರೈತ ಮುಖಂಡರು ಭಾಗವಹಿಸಿದ್ದರು.
ವರದಿ: ಮೋಹನ್
ನಂಜನಗೂಡು: ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸಮೀಪ…
ನಂಜನಗೂಡು: ಅಪರಿಚಿತ ಕಾರು ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ…
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಯಿಂದ ಗೊಲಗೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆ ಅಪಘಾತದಲ್ಲಿ ಗೊಲಗೇರಿ ಗ್ರಾಮದ ಯುವಕ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಭಟ್ಕಳ ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಅವರು 50,000 ಲಂಚ ಸ್ವೀಕರಿಸುತ್ತಿದ್ದ ವೇಳೆ…
ಗೌರಿಬಿದನೂರು ನಗರದ ವಿನಾಯಕ ನಗರದ ವಾಸಿ ಪದ್ಮ ಜೈನ್ (59) ಎಂಬುವವರ 50 ಗ್ರಾಂ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ…
ಮುಂಡಗೋಡ ತಾಲೂಕಿನ ಪಟ್ಟಣದಲ್ಲಿ ಕಳೆದ ತಿಂಗಳು ನಡೆದ ಮನೆ ಕಳ್ಳತನದ ಆರೋಪಿಗಳನ್ನು ಬಂಧಿಸುವಲ್ಲಿ ಮುಂಡಗೋಡ ಪೋಲಿಸರು ಯಶಸ್ವಿಯಾಗಿದ್ದಾರೆ. ದಿನಾಂಕ 28-10-2024ರಂದು…