ಬೆಂಗಳೂರು: ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕ್ಷತಾ ರವಿಕುಮಾರ್ ಅವರ ಎದುರು ಅಶ್ಲೀಲವಾಗಿ ವರ್ತಿಸಿದ್ದ ಕಾರು ಚಾಲಕನನ್ನು ಚಾಮರಾಜಪೇಟೆ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬುಧವಾರ ಸಂಜೆ, ಗೋಪಾಲನ್ ಮಾಲ್ ಸಮೀಪ ಈ ಘಟನೆ ನಡೆದಿದೆ. ಕೆಎ 41 ಎಂ 4191 ನೋಂದಣಿ ಸಂಖ್ಯೆಯ ಕಾರು ಚಾಲನೆ ಮಾಡುತ್ತಿದ್ದ ಆರೋಪಿ, ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕೆ ಅಕ್ಷತಾ ಅವರು ಪ್ರಶ್ನೆ ಮಾಡಿದ್ದರು. ಇದರಿಂದ ಸಿಟ್ಟಿಗೆದ್ದ ಚಾಲಕ, ಅಶ್ಲೀಲವಾಗಿ ಸನ್ನೆ ತೋರಿಸಿ, ಕಾರು ಚಲಾಯಿಸಿಕೊಂಡು ಹೋಗಿದ್ದ.

ಘಟನೆಯ ನಂತರ, ಅಕ್ಷತಾ ರವಿಕುಮಾರ್ ಅವರು ತಕ್ಷಣವೇ ಚಾಮರಾಜಪೇಟೆ ಠಾಣೆಗೆ ದೂರು ನೀಡಿದರು. ದೂರು ಸ್ವೀಕರಿಸಿದ ಪೊಲೀಸರು, ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದರು.

ಈ ಘಟನೆ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಯಾಗಿದ್ದು, ಮಹಿಳಾ ಸುರಕ್ಷತೆ ಕುರಿತಂತೆ ಮತ್ತೆ ಪ್ರಶ್ನೆಗಳು ಎದ್ದಿವೆ. ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

error: Content is protected !!