ಮೈಸೂರಿನಲ್ಲಿ ಗೃಹಲಕ್ಷಿ ಯೋಜನೆ ನಕಲಿ ಸರ್ಟಿಫಿಕೇಟ್ ಸಿದ್ದಪಡಿಸುತ್ತಿದ್ದ ಸೈಬರ್ ಸೆಂಟರ್ ಮಾಲೀಕನೊಬ್ಬನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಸುರೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ಮೇಟಗಳ್ಳಿ ಸುಧಾಮೂರ್ತಿ ರಸ್ತೆಯಲ್ಲಿರುವ ‘ನಕುಲ್ ನೆಟ್ವರ್ಕ್’ ಹೆಸರಿನಲ್ಲಿ ಸೈಬರ್ ಸೆಂಟರ್ ನಡೆಸುತ್ತಿದ್ದ.
ಇಲ್ಲಿ ಗೃಹಲಕ್ಷ್ಮೀ ಯೋಜನೆಯ ನಕಲಿ ಸರ್ಟಿಫಿಕೇಟ್ಗಳನ್ನು ಸಿದ್ಧಪಡಿಸಿ ಜನರನ್ನು ಯಾಮಾರಿಸುತ್ತಿದ್ದ. ಈ ಕುರಿತಾಗಿ ಸುಕೇಶ್ ಕುಮಾರ್ ಎಂಬುವವರು ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿಯ ಸಂದರ್ಭದಲ್ಲಿ ಫೇಕ್ ಸರ್ಟಿಫಿಕೇಟ್ಗಳನ್ನ ವಶಕ್ಕೆ ಪಡೆದುಕೊಂಡಿರುವ ಪೋಲೀಸರು ಸೈಬರ್ ಸೆಂಟರ್ಗೆ ಬೀಗ ಜಡಿದಿದ್ದಾರೆ. ಈತ ನಕುಲ್ ನೆಟ್ವರ್ಲ್ಡ್ ಎಂಬ ಅನಧಿಕೃತ ಸೇವಾ ಕೇಂದ್ರ ಪ್ರಾರಂಭಿಸಿ ಗೃಹಲಕ್ಷ್ಮಿ ಯೋಜನೆಯ ಫೇಕ್ ಸರ್ಟಿಫಿಕೇಟ್ ಮಾಡುತ್ತಿದ್ದ ಎನ್ನಲಾಗಿದೆ. ಇದೀಗ ಮೇಟಗಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.