
ಹಾಸನದಲ್ಲಿ ಕುಟುಂಬ ಕಲಹ ತೀವ್ರಗೊಂಡ ಪರಿಣಾಮ, ಅಸಾಧಾರಣ ಘಟನೆ ಬೆಳಕಿಗೆ ಬಂದಿದೆ. ಹೊಸ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಕೈಯಲ್ಲಿ ಲಾಂಗ್ ಹಿಡಿದು ಓಡಾಡಿದ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪ್ರಾಥಮಿಕ ಮಾಹಿತಿಯಂತೆ, ಈಕೆಯ ಪತಿ ಕೆಲವು ವ್ಯಕ್ತಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದರೆ, ಮಹಿಳೆ ಲಾಂಗ್ ಹಿಡಿದು ಅವರ ಹಿಂದೆ ಓಡುತ್ತಿದ್ದಂತೆ ಕಾಣುತ್ತದೆ. ಈ ದೃಶ್ಯ ಸ್ಥಳೀಯರಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಪರಿಸ್ಥಿತಿ ಕೆಲಕಾಲ ಉದ್ವಿಗ್ನಗೊಂಡಿತು.
ಈ ಪ್ರಕರಣ ಸಂಬಂಧ ಇನ್ನೂ ಯಾವುದೇ ಪೊಲೀಸ್ ದೂರು ದಾಖಲಾಗಿಲ್ಲ. ಲಾಂಗ್ ಹಿಡಿದು ಓಡಿದ ಮಹಿಳೆಯ ಗುರುತು ಇನ್ನೂ ಪತ್ತೆಯಾಗದೆ, ಪೊಲೀಸರು ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಲು ಮುಂದಾಗಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮುಂದಿನ ತನಿಖೆ ಮುಂದುವರಿಯಲಿದೆ.