ಬಿಬಿಎಂಪಿ ವ್ಯಾಪ್ತಿಯ ಅನಧಿಕೃತ ವಾಣಿಜ್ಯ ಜಾಹೀರಾತುಗಳು ಮತ್ತು ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಮತ್ತಿತರೇ ಮುದ್ರಿತ ಜಾಹೀರಾತುಗಳನ್ನು ನಿಷೇಧಿಸಲಾಗಿದೆ. ಜಾಹೀರಾತು ಫಲಕ ಮತ್ತು ಸಾರ್ವಜನಿಕ ಸಂದೇಶದ ಉಪವಿಧಿಗಳು-2018′ ರಲ್ಲಿ ಅಂಗಡಿ ಮುಂಗಟ್ಟು ಜಾಹೀರಾತುಗಳು, ವಾಹನ ಸ್ವ-ಜಾಹೀರಾತು ಇನ್ನಿತರೆ ಸಣ್ಣಪುಟ್ಟ ಜಾಹೀರಾತುಗಳನ್ನು ಸೀಮಿತ ಅವಧಿಗೆ ಮತ್ತು ಸೀಮಿತ ಅಳತೆಗೆ ಅನುಮತಿಸಲು ಮಾತ್ರ ಅವಕಾಶವಿದೆ. ಇವುಗಳನ್ನು ಹೊರತುಪಡಿಸಿ ಇತರೆ ಯಾವುದೇ ಖಾಸಗಿ ಸ್ವತ್ತುಗಳಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಿ ವಾಣಿಜ್ಯ ಜಾಹೀರಾತುಗಳನ್ನು ಪ್ರದರ್ಶಿಸುವುದು, ಎಲ್.ಇ.ಡಿ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಹಾಗೂ ಸಾರ್ವಜನಿಕ ಮತ್ತು ವೈಯಕ್ತಿಕ ಜಾಹೀರಾತುಗಳು, ಶುಭಾಶಯಗಳು, ಸಭೆ ಸಮಾರಂಭಗಳು ಕುರಿತ ಜಾಹೀರಾತು ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರ, ಬಾವುಟಗಳು ಇತ್ಯಾದಿ ಅಳವಡಿಸುವುದನ್ನು ನಿಷೇಧಿಸಲಾಗಿದೆ.
ಆದ್ರೂ ಕೂಡ ಮತ್ತೆ ಮತ್ತೆ ಜಾಹೀರಾತು ಅಳವಡಿಸುತ್ತಿರುವುದರಿಂದ ಸಾರ್ವಜನಿಕ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿರುವುದು ಅಲ್ಲದೇ ನಗರದ ಸೌಂದರ್ಯ ಹಾಳಾಗುತ್ತಿದೆ ಎಂದು ಕಂದಾಯ/ಜಾಹೀರಾತು ವಿಭಾಗದ ವಿಶೇಷ ಆಯುಕ್ತರಾದ ಡಾ. ಆರ್.ಎಲ್ ದೀಪಕ್ ರವರು ಸಾರ್ವಜನಿಕ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಬಿಬಿಎಂಪಿ ಕಾಯ್ದೆ 2020 ಮತ್ತು ಕರ್ನಾಟಕ ಮುಕ್ತ ಸ್ಥಳಗಳ ಕಾಯ್ದೆ 1981ರ ಕಲಂ(3)ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಈ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಣಿಜ್ಯ ಉತ್ಪನ್ನ ಮತ್ತು ಸೇವೆಗಳನ್ನು ಒದಗಿಸುವ ಕಂಪನಿ ಅಥವಾ ಉತ್ಪಾದಕರು ತಮ್ಮ ಉತ್ಪನ್ನಗಳ ಬಗ್ಗೆ ವಾಣಿಜ್ಯ ಜಾಹೀರಾತುಗಳ ಮೂಲಕ ಸಾರ್ವಜನಿಕ ಪ್ರದರ್ಶನ ಮಾಡುವಲ್ಲಿ ಖಾಸಗಿ ಏಜೆನ್ಸಿಗಳು ಅಧಿಕೃತವಾಗಿ ಬಿಬಿಎಂಪಿಯಿಂದ ಪರವಾನಿಗೆ ಪಡೆದಿರುವ ಏಜೆನ್ಸಿಗಳ ಮೂಲಕ ವಾಣಿಜ್ಯ ಜಾಹೀರಾತು ಪ್ರದರ್ಶನ ಮಾಡುವುದು. ಅದರ ಹೊರತಾಗಿ ಜಾಹೀರಾತು ಪ್ರಕಟಸುವಂತಹ ಕಂಪನಿ ಅಥವಾ ಉತ್ಪಾದಕರು ಹಾಗೂ ಪ್ರಕಟಣಾಗಾರರ ಮತ್ತು ಮುದ್ರಣಗಾರರು ಮತ್ತು ಸಂಬಂಧಪಟ್ಟ ಅನಧಿಕೃತ ಏಜೆನ್ಸಿಗಳ ಹಾಗೂ ಪ್ಲೆಕ್ಸ್ ಬ್ಯಾನರ್‌ಗಳಲ್ಲಿ ಭಾವಚಿತ್ರವಿರುವ ವ್ಯಕ್ತಿಗಳ ವಿರುದ್ಧ ಕರ್ನಾಟಕ ಮುಕ್ತ ಸ್ಥಳಗಳ ವಿರೂಪಗೊಳಿಸುವಿಕೆ ತಡೆ ಕಾಯ್ದೆ 1981ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಜೊತಗೆ ,6 ತಿಂಗಳವರೆಗಿನ ಕಾರಾವಾಸ ಅಥವಾ 1,000 ರೂಪಾಯಿ ವರೆಗೆ ದಂಡ ವಿಧಿಸಲಾಗುವುದು ಎಂದು ಕಂದಾಯ ಹಾಗೂ ಜಾಹೀರಾತು ವಿಭಾಗದ ವಿಶೇಷ ಆಯುಕ್ತರಾದ ಡಾ. ಆರ್.ಎಲ್ ದೀಪಕ್ ತಿಳಿಸಿದ್ದಾರೆ.
ನಂಜನಗೂಡು: ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸಮೀಪ…
ನಂಜನಗೂಡು: ಅಪರಿಚಿತ ಕಾರು ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ…
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಯಿಂದ ಗೊಲಗೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆ ಅಪಘಾತದಲ್ಲಿ ಗೊಲಗೇರಿ ಗ್ರಾಮದ ಯುವಕ…
ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್‌ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಭಟ್ಕಳ ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಅವರು 50,000 ಲಂಚ ಸ್ವೀಕರಿಸುತ್ತಿದ್ದ ವೇಳೆ…
ಗೌರಿಬಿದನೂರು ನಗರದ ವಿನಾಯಕ ನಗರದ ವಾಸಿ ಪದ್ಮ ಜೈನ್ (59) ಎಂಬುವವರ 50 ಗ್ರಾಂ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ…