
ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ರೋಟ್ಟು ರಸ್ತೆಯಲ್ಲಿ ನಾಲ್ಕು ತಿಂಗಳ ಹೆಣ್ಣು ಮಗು ಪತ್ತೆಯಾಗಿರುವ ಘಟನೆ ಮಾ. 22ರಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಮಗು ಅನಾಥ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡ ಸಾರ್ವಜನಿಕರು ತಕ್ಷಣ ಅದನ್ನು ರಕ್ಷಿಸಿ ಆರೈಕೆ ಮಾಡಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಧರ್ಮಸ್ಥಳ ಪೊಲೀಸರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಮಗುವನ್ನು ಅವರ ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ, ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ತಪಾಸಣೆಗೆ ಒಳಪಡಿಸಲಾಗಿದೆ.
ಯಾರು ಮಗುವನ್ನು ಅಲ್ಲಿಟ್ಟುಹೋದರು, ಏಕೆ ಬಿಟ್ಟುಹೋದರು ಎಂಬ ಕುರಿತಂತೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಯಾವುದೇ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಲು ವಿನಂತಿಸಲಾಗಿದೆ.