Latest

ಬೆಳಾಲು ಗ್ರಾಮದಲ್ಲಿ ನಾಲ್ಕು ತಿಂಗಳ ಹೆಣ್ಣು ಮಗು ಪತ್ತೆ: ಪೊಲೀಸರು ತನಿಖೆ ಆರಂಭ

ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ರೋಟ್ಟು ರಸ್ತೆಯಲ್ಲಿ ನಾಲ್ಕು ತಿಂಗಳ ಹೆಣ್ಣು ಮಗು ಪತ್ತೆಯಾಗಿರುವ ಘಟನೆ ಮಾ. 22ರಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಮಗು ಅನಾಥ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡ ಸಾರ್ವಜನಿಕರು ತಕ್ಷಣ ಅದನ್ನು ರಕ್ಷಿಸಿ ಆರೈಕೆ ಮಾಡಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಧರ್ಮಸ್ಥಳ ಪೊಲೀಸರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಮಗುವನ್ನು ಅವರ ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ, ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ತಪಾಸಣೆಗೆ ಒಳಪಡಿಸಲಾಗಿದೆ.

ಯಾರು ಮಗುವನ್ನು ಅಲ್ಲಿಟ್ಟುಹೋದರು, ಏಕೆ ಬಿಟ್ಟುಹೋದರು ಎಂಬ ಕುರಿತಂತೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಯಾವುದೇ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಲು ವಿನಂತಿಸಲಾಗಿದೆ.

nazeer ahamad

Recent Posts

ಹಾಸನದಲ್ಲಿ ದುರಂತ: ಹೇಮಾವತಿ ನದಿ ಮತ್ತು ಕೆರೆಯಲ್ಲಿ ಮುಳುಗಿ ನಾಲ್ವರು ಸಾವು.

ಹಾಸನ: ಹಾಸನ ಜಿಲ್ಲೆಯ ಎರಡು ವಿಭಿನ್ನ ಘಟನೆಯಲ್ಲಿ ನಾಲ್ವರು ದುರ್ಘಟನಾವಶಾತ್ ನೀರುಪಾಲಾಗಿದ್ದಾರೆ. ಒಂದು ಘಟನೆ ಸಕಲೇಶಪುರ ತಾಲ್ಲೂಕಿನ ಹೆನ್ಲಿ ಈ…

9 hours ago

ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಆತ್ಮಹತ್ಯೆ.

ಬೆಂಗಳೂರು: ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ನಾಲ್ಕನೇ ಮಹಡಿಯಿಂದ ಹಾರಿ 21 ವರ್ಷದ ಬಿಸಿಎ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಶುಕ್ರವಾರ…

10 hours ago

ಹಾಸನದಲ್ಲಿ ಕುಟುಂಬ ಕಲಹ: ಲಾಂಗ್ ಹಿಡಿದು ಓಡಾಡಿದ ಮಹಿಳೆ!

ಹಾಸನದಲ್ಲಿ ಕುಟುಂಬ ಕಲಹ ತೀವ್ರಗೊಂಡ ಪರಿಣಾಮ, ಅಸಾಧಾರಣ ಘಟನೆ ಬೆಳಕಿಗೆ ಬಂದಿದೆ. ಹೊಸ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಕೈಯಲ್ಲಿ ಲಾಂಗ್…

12 hours ago

ನಡು ಬೀದಿಯಲ್ಲಿ ಅಂಕಲ್ನ ಅಸಭ್ಯ ವರ್ತನೆಯ ವಿಡಿಯೋ ವೈರಲ್.

ಸೋಶಿಯಲ್ ಮೀಡಿಯಾದ ಪ್ರಭಾವ ಹೆಚ್ಚಾಗುತ್ತಿದ್ದಂತೆ ಹಲವಾರು ವಿಚಿತ್ರ ಘಟನೆಗಳ ವಿಡಿಯೋಗಳು ವೈರಲ್ ಆಗುತ್ತವೆ. ಇತ್ತೀಚೆಗೆ ಅಂತಹದ್ದೇ ಒಂದು ವಿಡಿಯೋ ಸಾಮಾಜಿಕ…

12 hours ago

ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಜೇನು ಕೃಷಿ ಪದ್ಧತಿ ತರಬೇತಿ

ಮುಂಡಗೋಡ: ತಾಲ್ಲೂಕಿನ ರೈತರು ತಮ್ಮ ಕೃಷಿ ಬೇಸಾಯದೊಂದಿಗೆ ಜೇನು ಕೃಷಿ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕೆಂದು ರಾಷ್ಟ್ರೀಯ ಜೇನುಮಂಡಳಿ ನವದೆಹಲಿ, ಜಿಲ್ಲಾ…

12 hours ago

ಕಳಚೆ ಭೂಕುಸಿತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಕಳಚೆ ಭೂಕುಸಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದು, ಈ ವೇಳೆ…

12 hours ago