ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ಮುದವಿನಕೊಪ್ಪ ಗ್ರಾಮದಲ್ಲಿ ಕೊಳಚೆ ನೀರಿನಲ್ಲಿ ಸಾರ್ವಜನಿಕರ ಪರದಾಟ ಹೇಳುವವರಿಲ್ಲ ಕೇಳುವವರಿಲ್ಲ ಲ್ಯಾಂಡ್ ಆರ್ಮಿ ಅಧಿಕಾರಿಗಳು ಎರಡು ವರ್ಷದಿಂದ ಸಿಸಿ ರಸ್ತೆ ನಿರ್ಮಾಣ ಮಾಡುತ್ತೇವೆ ಎಂದು ಸುಳ್ಳು ಭರವಸೆ ನೀಡುತ್ತಾ ಬಂದಿದ್ದಾರೆ,ಗ್ರಾಮದ ಎಲ್ಲ ಜನರು ದಿನನಿತ್ಯ ಓಡಾಡುವ ಮುಖ್ಯ ರಸ್ತೆ ಇದಾಗಿದ್ದು, ಇನ್ನುವರೆಗೂ ಸರಿಯಾಗಿ ಕೆಲಸ ಆಗುತ್ತಿಲ್ಲ.
ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಮಲೇರಿಯಾ ಡೆಂಗ್ಯೂ ಅಂತಹ ರೋಗಗಳು ಹುಟ್ಟುವ ಮುಂಚೆ ಎಚ್ಚೆತ್ತುಕೊಳ್ಳಬೇಕು. ಗ್ರಾಮದ ಜನರು ಲ್ಯಾಂಡ್ ಆರ್ಮಿ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಇನ್ನಾದರೂ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಬೇಟಿ ಕೊಟ್ಟು ಸಮಸ್ಯೆ ಬಗೆಹರಿಸಬೇಕು.
ವರದಿ:ಸಂಗಪ್ಪ ಚಲವಾದಿ