ಅಪ್ರಾಪ್ತ ಬಾಲಕಿ ಮೇಲೆ ನಾಲ್ವರು ಸ್ನೇಹಿತರೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಪೈಶಾಚಿಕ ಘಟನೆ ಹುಬ್ಬಳ್ಳಿಯ ಬೈಪಾಸ್ ರಿಂಗ್ ರೋಡ್ ಬ್ರಿಡ್ಜ್ ಬಳಿ ನಡೆದಿದೆ. ಮೊಬೈಲ್ ಫೋನ್ ಕೊಡಿಸುವುದಾಗಿ ಹೇಳಿ ಬಾಲಕಿಯನ್ನು ನಂಬಿಸಿ ಕರೆದೊಯ್ದ ದುರುಳರು, ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾರೆ. ದೇವರಾಜ್, ಪಕ್ಕಿರೇಶ್ ಹಾಗೂ ಇನ್ನಿಬ್ಬರು ಸೇರಿ ಕೃತ್ಯವೆಸಗಿದ್ದಾರೆ.
ಘಟನೆ ಬಗ್ಗೆ ಸಂತ್ರಸ್ತ ಯುವತಿ ಹುಬ್ಬಳ್ಳಿ ಗೋಕುಲ್ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.