ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳುವು ಪ್ರಕರಣದಲ್ಲಿ ದಿನಾಂಕ ೧೩/೦೮/೨೦೨೨ ರಂದು ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿ ಇವರುಗಳು ಮೈಸೂರು ನಗರ ನರಸಿಂಹರಾಜ ಪೊಲೀಸ್ ಠಾಣೆ, ಮೇಟಗಳ್ಳಿ ಪೊಲೀಸ್ ಠಾಣೆ ಹಾಗೂ ಮಂಡ್ಯ ಜಿಲ್ಲೆಯ ಮಳವಳ್ಳಿ ಟೌನ್ ಪೊಲೀಸ್ ಠಾಣೆಯ ಸರಹದ್ದಿನಲ್ಲಿರುವ ಕರ್ನಾಟಕ ಬ್ಯಾಂಕ್ ಕಛೇರಿಯ ಹೊರಗೆ ಅಳವಡಿಸಿದ್ದ ಜನರೇಟರ್‌ಗಳನ್ನು ಕನ್ನಕಳವು ಮಾಡಿದ್ದು ಇವರು ನೀಡಿದ ಮಾಹಿತಿಯ ಮೇರೆಗೆ ದಿನಾಂಕ ೧೭/೦೮/೨೦೨೨ ರಂದು ಕಳವು ಮಾಲುಗಳನ್ನು ಸ್ವೀಕರಿಸುತ್ತಿದ್ದ ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಿ ಆತನಿಂದ ೩,೬೬,೦೦೦/- ರೂ ಬೆಲೆಬಾಳುವ ಹೋಂಡಾ ಕಂಪನಿಯ ೩ ಜನರೇಟರ್‌ಗಳನ್ನು ಹಾಗೂ ೨ನೇ ಆರೋಪಿಯ ಸ್ನೇಹಿತನಿಂದ ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಇನೋವಾ ಕಾರನ್ನು ಅಮಾನತ್ತುಪಡಿಸಿಕೊಳ್ಳಲಾಗಿದೆ.
ಈ ಪತ್ತೆ ಕಾರ್ಯದಿಂದ ಮೈಸೂರು ನಗರ ನರಸಿಂಹರಾಜ ಪೊಲೀಸ್ ಠಾಣೆಯ-೦೧, ಮೇಟಗಳ್ಳಿ ಪೊಲೀಸ್ ಠಾಣೆಯ-೦೧ ಕಳವು ಪ್ರಕರಣಗಳು ಮತ್ತು ಮಂಡ್ಯ ಜಿಲ್ಲೆ ಮಳವಳ್ಳಿ ಟೌನ್ ಪೊಲೀಸ್ ಠಾಣೆಯ-೦೧ ಕನ್ನಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ.
ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಡಿಸಿಪಿ ಕೇಂದ್ರಸ್ಥಾನ ಅಪರಾಧ ಮತ್ತು ಸಂಚಾರ ವಿಭಾಗ ರವರಾದ ಶ್ರೀಮತಿ ಗೀತ ಎಂ.ಎಸ್, ಐ.ಪಿ.ಎಸ್ ರವರು ಮತ್ತು ನರಸಿಂಹರಾಜ ವಿಭಾಗದ ಎ.ಸಿ.ಪಿ ರವರಾದ ಶ್ರೀ ಶಿವಶಂಕರ್ ರವರ ಮಾರ್ಗದರ್ಶನದಲ್ಲಿ ನರಸಿಂಹರಾಜ ಪೊಲೀಸ್ ಇನ್ಸ್ಪೆಕ್ಟರ್ ಅಜರುದ್ದೀನ್, ಪಿ.ಎಸ್.ಐ ಜೈಕೀರ್ತಿ, ಪಿ.ಎಸ್.ಐ ಗಂಗಾಧರ್, ಎಎಸ್‌ಐ ರವಿ ಹಾಗೂ ಸಿಬ್ಬಂದಿಗಳಾದ ಮಂಜುನಾಥ, ಮಹೇಶ, ಸುನೀಲ್ ಕುಮಾರ್, ದೊಡ್ಡೇಗೌಡ, ಈರೇಶ ಮತ್ತು ಬಸವರಾಜು ರವರುಗಳು ಮಾಡಿರುತ್ತಾರೆ.
ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.

error: Content is protected !!