ಬಾಗಲಕೋಟೆ: ಲಂಚ ಸ್ವೀಕರಿಸುವಾಗ ಗ್ರಾಮ ಪಂಚಾಯತಿ ಪಿಡಿಒ ಗಳು ಅಕ್ಟೋಬರ್ 20 ಗುರುವಾರ ದಂದು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಬಾಗಲಕೋಟೆ ತಾಲೂಕಿನ ಬೇವಿನಮಟ್ಟಿ ಗ್ರಾಮ ಪಂಚಾಯತಿ ಪಿಡಿಒ ಚಂದ್ರಕಾಂತ ತಿಮ್ಮಾಪುರ ಮತ್ತು ರಾಂಪುರ ಗ್ರಾಮ ಪಂಚಾಯತಿ ಪಿಡಿಒ ಮುದಕಣ್ಣ ತೇಜಿ ಅವರ ಮೇಲೆ ದಾಳಿ ನಡೆಸಿದ್ದು, ಅವರನ್ನು ಲೋಕಾಯುಕ್ತರು ವಶಕ್ಕೆ ಪಡೆದಿದ್ದಾರೆ.
NA (ಎನ್ ಎ) ಪ್ಲಾಟ್ ಎಂಟ್ರಿ ಮಾಡಿಕೊಡಲು 2,50,000 ಲಕ್ಷ ರೂಪಾಯಿಗಳನ್ನು ಕೇಳಲಾಗಿದೆ ಎನ್ನಲಾಗಿದೆ. ಇದರ ಪೈಕಿ ಮೊದಲ ಕಂತಿನಲ್ಲಿ 1 ಲಕ್ಷ ರೂಪಾಯಿಗಳನ್ನು ಹಾಗೂ ಉಳಿದ 1,50,000 ಲಕ್ಷ ರೂಪಾಯಿಗಳನ್ನು ಕೆಲಸದ ನಂತರ ಕೊಡಬೇಕೆಂದು ಹೊನ್ನಾಕಟ್ಟಿ ಗ್ರಾಮದ ವಾಸು ಜಾಧವ್ ಎಂಬುವವರಿಗೆ ಬೇಡಿಕೆ ಇಟ್ಟಿದ್ದರು.
ಈ ಮೂಲಕ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಲೋಕಾಯುಕ್ತರು ಪಿಡಿಓ ಗಳ ಮೇಲೆ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ವಿಜಯಪುರ ಜಿಲ್ಲಾ ಲೋಕಾಯುಕ್ತ ಎಸ್ಪಿ ಅನಿತಾ ಮಾರ್ಗದರ್ಶನದಲ್ಲಿ ಬಾಗಲಕೋಟೆ ಲೋಕಾಯುಕ್ತ ಡಿಎಸ್ಪಿ ಪುಷ್ಪಲತಾ ಹಾಗೂ ಸಿಪಿಐ ಮಲ್ಲಪ್ಪ ಬಿದರಿ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ. ಇಬ್ಬರು ಪಿಡಿಒ ಗಳನ್ನು ವಶಕ್ಕೆ ಪಡೆದ ಲೋಕಾಯುಕ್ತರು ವಿಚಾರಣೆ ನಡೆಸಿದ್ದಾರೆ.
ವರದಿ: ವಿಶ್ವನಾಥ ಭಜಂತ್ರಿ