Latest

ಪಟ್ಟಣ ಪಂಚಾಯಿತಿ ಆಡಳಿತ ವ್ಯವಸ್ಥೆ ಕುರಿತು ಪ್ರೌಢಶಾಲಾ ವಿದ್ಯಾರ್ಥಿನಿಯರ ಜೊತೆ ಮುಖ್ಯಾಧಿಕಾರಿ ಚರ್ಚೆ

ಕೊಟ್ಟೂರು:- ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿನಿಯರು ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಎ. ನಸಾರುಲ್ಲ ರವರ ಜೊತೆ ಸ್ಥಳೀಯ ಪಟ್ಟಣ ಪಂಚಾಯಿತಿ ಆಡಳಿತ ವ್ಯವಸ್ಥೆಯ ಕುರಿತು ಗುರುವಾರ ಚರ್ಚೆ ನಡೆಸಿದರು

ಈ ಸಂದರ್ಭದಲ್ಲಿ ಮಾತನಾಡಿದ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಯವರು ಪಂಚಾಯಿತಿಗಳು ಹೇಗೆ ಉಗಮವಾಯಿತು ಇದರ ಉದ್ದೇಶ ಏನು ಇದರಿಂದ ಏನೆಲ್ಲಾ ಪ್ರಯೋಜನ ಇದರ ಮೂಲ ಇತಿಹಾಸದ ಸಂಪೂರ್ಣ ಮಾಹಿತಿಯನ್ನು ವಿದ್ಯಾರ್ಥಿನಿಯರಿಗೆ ತಿಳಿಸಲಾಯಿತು .

ಪ್ರಸ್ತುತ ಕೊಟ್ಟೂರು ಪಟ್ಟಣವನ್ನು 20 ವಾರ್ಡ್‌ಗಳಾಗಿ ವಿಂಗಡಿಸಲಾಗಿದ್ದು, ಕೊಟ್ಟೂರು ಟೌನ್ ಪಂಚಾಯತ್ 26,289 ಜನಸಂಖ್ಯೆಯನ್ನು ಹೊಂದಿದೆ ಅದರಲ್ಲಿ 13,190 ಪುರುಷರು ಮತ್ತು 13,099 ಮಹಿಳೆಯರು ಇದು 2011 ರ ಜನಗಣತಿಯ ವರದಿಯ ಪ್ರಕಾರವಾಗಿದೆ ಎಂದರು

ಪಟ್ಟಣ ಪಂಚಾಯಿತಿಯ ಆಡಳಿತ ವ್ಯವಸ್ಥೆಯಲ್ಲಿ ಮನೆಗಳಿಗೆ ಸಂಬಂಧಿಸಿದಂತೆ ಖಾತಾ ನಕಲು, ಅಂಗಡಿಗಳಿಗೆ, ಉದ್ಯಮಿದಾರರಿಗೆ , ವಾಣಿಜ್ಯ ಪರವಾನಿಗೆ ನೀಡಲಾಗುವುದು, ಜನನ, ಮರಣ ಪ್ರಮಾಣ ಪತ್ರಗಳು, ಕಟ್ಟಡ ಪರವಾನಿಗೆ ನೀಡುವುದು, ನಳ ಮತ್ತು ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು , ಆಸ್ತಿ ಮಾಲಿಕತ್ವದ ಹಕ್ಕು ಬದಲಾವಣೆ, ಈಗೆ ಹಲವಾರು ಒಟ್ಟು 18 ಸೇವೆಗಳನ್ನು ನೀಡಲಾಗಿದೆ ಹಾಗೂ ವಿದ್ಯಾರ್ಥಿಗಳಿಗೆ ಬುಕ್ ಬಿಲ್ ಎಂಬ ಪ್ರೋತ್ಸಾಹ ಧನವಾಗಿ ಪ್ರತಿ ವರ್ಷ ನೀಡಲಾಗುತ್ತಿದೆ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು

ಕಿರಿಯ ಆರೋಗ್ಯ ನಿರೀಕ್ಷಕರಾದ ಅನುಷಾ ರವರು ಮಾತನಾಡಿ ಪ್ಲಾಸ್ಟಿಕ್ ನಿಂದ ಆಗುವ ಅನಾನುಕೂಲಗಳು ಕುರಿತು ಚರ್ಚಿಸಿದರು
ಜನನ ಮತ್ತು ಮರಣ ಪ್ರಮಾಣ ಪತ್ರಗಳ ಬಗ್ಗೆ ಮಾಹಿತಿ ನೀಡಲಾಯಿತು ಮತ್ತು ಹಸಿ ಕಸ ಮತ್ತು ಒಣ ಕಸ ಪ್ರತಿ ಮನೆಯಲ್ಲಿ ವಿಂಗಡಣೆ ಮಾಡಬೇಕು ಪಟ್ಟಣ ಸ್ವಚ್ಛತೆ ಹೊಂದಲು ಪಟ್ಟಣ ಪಂಚಾಯಿತಿಯ ಸಿಬ್ಬಂದಿ ಜೊತೆಗೆ ಸಾರ್ವಜನಿಕರು ಸಹಕರಿಸುವಂತೆ ನಿಮ್ಮ ನಿಮ್ಮ ಮನೆಯಲ್ಲಿ ವಿದ್ಯಾರ್ಥಿಗಳು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ನಂತರ ವಿದ್ಯಾರ್ಥಿನಿಯರು ಮುಖ್ಯಧಿಕಾರಿಗಳ ಜೊತೆ ಪಟ್ಟಣ ಪಂಚಾಯತ್ ಆಡಳಿತದ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಕೇಳುವುದರ ಮೂಲಕ ಪರಿಹಾರ ಕಂಡುಕೊಂಡರು ಹಾಗೂ ವಿದ್ಯಾರ್ಥಿನಿಯರು ಮುಖ್ಯಧಿಕಾರಿಗಳಿಗೆ ಶಾಲೆಯ ಸಮಸ್ಯೆ ಕುರಿತು ಪರಿಹರಿಸುವಂತೆ ಮನವಿ ಪತ್ರ ಸಲ್ಲಿಸಲಾಯಿತು

ಈ ಸಂದರ್ಭದಲ್ಲಿ ಸದಸ್ಯೆ ವೀಣಾ ವಿವೇಕಾನಂದ, ಶಿಕ್ಷಕ ಹೆಚ್. ಮಹಾಂತೇಶ್, ಜಿ. ಕೊಟ್ರಮ್ಮ,ಅನಿತಾ ಮತ್ತು ವಿದ್ಯಾರ್ಥಿನಿಯರು ಇದ್ದರು.

ವರದಿ:- ಮಣಿಕಂಠ. ಬಿ

kiran

Recent Posts

ಬೈಕ್ ಟಿಪ್ಪರ್ ನಡುವೆ ಡಿಕ್ಕಿ ಬೈಕ್ ಸವಾರ ಸಾವು

ನಂಜನಗೂಡು: ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸಮೀಪ…

1 month ago

ಅಪರಿಚಿತ ಕಾರು ಡಿಕ್ಕಿ; ಐವರಿಗೆ ಗಂಭೀರ ಗಾಯ, ಓರ್ವ ಮಹಿಳೆ ಸ್ಥಳದಲ್ಲೇ ಸಾವು.

ನಂಜನಗೂಡು: ಅಪರಿಚಿತ ಕಾರು ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ…

1 month ago

ರಸ್ತೆ ಅಪಘಾತ; ಗೊಲಗೇರಿ ಗ್ರಾಮದ ಯುವಕ ಸಾವು.

ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಯಿಂದ ಗೊಲಗೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆ ಅಪಘಾತದಲ್ಲಿ ಗೊಲಗೇರಿ ಗ್ರಾಮದ ಯುವಕ…

1 month ago

ಕುಡಿಯುವ ನೀರಿನ ಬಿಲ್ ಪಾವತಿ ಮಾಡಬೇಡಿ -ಮಾಜಿ ಶಾಸಕ ಹರ್ಷವರ್ಧನ್

ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್‌ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ…

1 month ago

ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಭಟ್ಕಳ ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಅವರು 50,000 ಲಂಚ ಸ್ವೀಕರಿಸುತ್ತಿದ್ದ ವೇಳೆ…

1 month ago

ಮಟ-ಮಟ ಮಧ್ಯಾಹ್ನ‌ ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿ ‌

ಗೌರಿಬಿದನೂರು ನಗರದ ವಿನಾಯಕ ನಗರದ ವಾಸಿ ಪದ್ಮ ಜೈನ್ (59) ಎಂಬುವವರ 50 ಗ್ರಾಂ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ…

1 month ago