ಕುಂದಗೋಳ; ತಾಲೂಕಿನ ಯರಗುಪ್ಪಿ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ಶಿಬಿರ ಇಂದು ಏರ್ಪಡಿಸಿಲಾಗಿತ್ತು. ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಶುಕ್ರವಾರದಂದು ಹಮ್ಮಿಕೊಳ್ಳಲಾಗಿತ್ತು. ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೊಲಿ ಕಾರ್ಮಿಕರಿಗೆ ಉತ್ತಮ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಕೊಲಿ ಕಾರ್ಮಿಕರಿಗೆ ಆರೋಗ್ಯವನ್ನು ತಪಾಸಣೆ ನಡೆಸಲಾಯಿತು. ಕಾರ್ಮಿಕರು ತಮ್ಮ ದೇಹದ ಆರೋಗ್ಯ ಉತ್ತಮವಾಗಿ ಇಟ್ಟುಕೊಳ್ಳಬೇಕು, ಜೊತೆಗೆ ಅನಾರೋಗ್ಯದ ಲಕ್ಷಣಗಳು ಕಂಡು ಬಂದರೆ ಹತ್ತಿರದ ಆಸ್ಪತ್ರೆಗೆ ಬೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳಬೇಕು. ಈ ಶಿಬಿರದಲ್ಲಿ ರಕ್ತದ ಒತ್ತಡ, ಶುಗರ್ , ರಕ್ತ ಪರೀಕ್ಷೆ , ಕಣ್ಣಿನ ಪರೀಕ್ಷೆ ಇನ್ನೂ ಮುಂತಾದ ಪರೀಕ್ಷೇಗಳನ್ನು ಏಕಕಾಲಕ್ಕೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು, ಕೆ ಎಚ್ ಪಿಟಿ ಸಂಯೋಜಕರು ಬಿ ಎಪ್ ಟಿ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತಿರಿದ್ದರು.
ವರದಿ; ಶಾನು ಯಲಿಗಾರ