
ಬೆಂಗಳೂರು ನೆಲಗದರನಹಳ್ಳಿಯಲ್ಲಿ ಪತಿ ಪತ್ನಿಯ ಸೌಂದರ್ಯ ಕುರಿತು ಟೀಕಿಸಿ ಹಲ್ಲೆ ಮಾಡಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಪತಿ ಪುಲಿ ಸಾಯಿಕುಮಾರ್ ಪತ್ನಿಯ ತೂಕ ಹೆಚ್ಚಾಗಿದೆ ಎಂಬ ಕಾರಣಕ್ಕೆ ಅವಳ ಮೇಲೆ ಖಾರದ ಪುಡಿ ಎರಚಿ ಹಲ್ಲೆ ಮಾಡಿದ್ದಾರೆ ಎಂದು ದೂರಿಸಲಾಗಿದೆ.
ಪತ್ನಿ ಈ ಕುರಿತು ಪೀಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪತಿ ಪದೇ ಪದೇ ಸೌಂದರ್ಯ ಕುರಿತು ಅಸಮಾಧಾನ ವ್ಯಕ್ತಪಡಿಸುತ್ತಾ, ಗಲಾಟೆ ಮಾಡುತ್ತಾರೆ ಎಂದು ಆರೋಪಿಸಿದ್ದಾರೆ. ಜೊತೆಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದು, ಪತ್ನಿಯ ಮೇಲೆ ಮಾತ್ರವಲ್ಲದೆ ಮಗ ಮತ್ತು ಅವಳ ತಂದೆ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
2021ರಲ್ಲಿ ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಪರಿಚಿತರಾದ ಜೋಡಿ ನಂತರ ವಿವಾಹವಾಗಿ, ದಾಂಪತ್ಯ ಜೀವನ ಆರಂಭಿಸಿದರು. ಪತ್ನಿ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದು, ಪತಿ ಖಾಸಗಿ ಬ್ಯಾಂಕ್ ಉದ್ಯೋಗಿ ಆಗಿದ್ದಾರೆ. ಮದುವೆಯಾದ ನಂತರದಿಂದಲೇ ವರದಕ್ಷಿಣೆಗಾಗಿ ಪೀಡನೆ ನೀಡುತ್ತಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
ಈ ಸಂಬಂಧ ಪುಲಿ ಸಾಯಿಕುಮಾರ್ ವಿರುದ್ಧ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.