ಮುಂಡಗೋಡ: ತಾಲೂಕಿನ ಕಾತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿಂಗನಹಳ್ಳಿ ಗ್ರಾಮದಲ್ಲಿ ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದ ಘಟನೆ ಜರುಗಿದೆ. ಇಡೀ ಗ್ರಾಮಕ್ಕೆ ಹಾಗೂ ಶಾಲೆಗೆ ಕಳೆದ ಒಂದು ತಿಂಗಳಿನಿಂದ ಸರಿಯಾಗಿ ನೀರು ಪೂರೈಕೆ ಆಗುತ್ತಿಲ್ಲ ಇದರಿಂದ ಮಧ್ಯಾಹ್ನದ ಬಿಸಿ ಊಟಕ್ಕೂ ಸಹ ತೊಂದರೆಯಾಗುತ್ತಿದ್ದು ಅದನ್ನು ಸರಿಪಡಿಸುವಂತೆ ಇದೇ ತಿಂಗಳು 15ನೇ ತಾರೀಕಿನಂದು ಊರಿನ ಗ್ರಾಮಸ್ಥರು ಹಾಗೂ ಎಸ್ ಡಿ ಎಮ್ ಸಿಯವರು ಇದನ್ನು ಸರಿಪಡಿಸುವಂತೆ ಗ್ರಾಮ ಪಂಚಾಯಿತಿಯವರಿಗೆ ಮನವಿಯನ್ನು ಸಲ್ಲಿಸಿದ್ದರು.ಆದರೂ ಸಹ ಗ್ರಾಮ ಪಂಚಾಯಿತಿಯವರು ಯಾವುದೇ ಕ್ರಮವನ್ನು ಕೈಗೊಳ್ಳದ ಕಾರಣ ಇಂದು ವಿದ್ಯಾರ್ಥಿಗಳು ರಾಜ್ಯ ಹೆದ್ದಾರಿಯನ್ನು ತಡೆದು ರಸ್ತೆಯಲ್ಲೇ ಕುಳಿತು ಖಾಲಿ ಬಿಂದಿಗೆ ಹಿಡಿದು ನೀರಿಗಾಗಿ ಗ್ರಾಮ ಪಂಚಾಯಿತಿ ವಿರುದ್ಧ ಪ್ರತಿಭಟನೆ ನಡೆಸಿದರು..
ಘಟನೆ ತಿಳಿದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಎರಡು ದಿನಗಳಲ್ಲಿ ಸಮಸ್ಯೆ ಬಗ್ಗೆ ಹರಿಸುವುದಾಗಿ ತಿಳಿಸಿ, ಶಾಲೆಗೆ ಟ್ಯಾಂಕರ್ ನಿಂದ ನೀರಿನ ವ್ಯವಸ್ಥೆ ಮಾಡಿಸಿದರು ಹಾಗಾಗಿ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ನಿಲ್ಲಿಸಿದರು.
ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹೇಳೋದೇನು..?ಈ ಬಗ್ಗೆ ಪತ್ರಿಕೆಯ ಪ್ರತಿನಿಧಿಯೊಂದಿಗೆ ಮಾತನಾಡಿದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ನಾನು ನಿನ್ನೆಯಷ್ಟೇ ಜಾರ್ಜನ್ನು ಪಡೆದುಕೊಂಡಿದ್ದು ಈ ಕುರಿತು ಸಿಬ್ಬಂದಿಗಳಿಂದ ಮಾಹಿತಿಯನ್ನು ಪಡೆದುಕೊಂಡಿದ್ದೇನೆ ಗ್ರಾಮದಲ್ಲಿ ಪೈಪ್ಲೈನ್ ವ್ಯವಸ್ಥೆ ಹಾಳಾಗಿದ್ದು ಸಂಬಂಧಿಸಿದ ಇಲಾಖೆಯ ಇಂಜಿನಿಯರ್ ಗಳೊಂದಿಗೆ ಮಾತನಾಡಿದ್ದು ಸಮಸ್ಯೆಯನ್ನು ಎರಡ್ಮೂರು ದಿನಗಳಲ್ಲಿ ಪರಿಹರಿಸಲಾಗುವುದು ಎಂದು ತಿಳಿಸಿದರು.
ವರದಿ:ಮಂಜುನಾಥ ಎಫ್ ಹರಿಜನ.

error: Content is protected !!