ಮಕ್ಕಳ ಅಶ್ಲೀಲತೆಯ ಮುದ್ರಿತ ಚಿತ್ರಗಳನ್ನು ಸಂಗ್ರಹಿಸಿದ್ದ 72 ವರ್ಷದ ಫ್ಲೋರಿಡಾ ಅಜ್ಜನನ್ನು ಬಂಧಿಸಲಾಗಿದೆ. ಈತನ ಬಳಿ 2.2 ಲಕ್ಷಕ್ಕಿಂತ ಹೆಚ್ಚಿನ ಚಿತ್ರಗಳ ಮುದ್ರಿತ ವಸ್ತುಗಳು ಸಿಕ್ಕಿವೆ. ಇವು ಒಂದು ಟನ್ ತೂಕವನ್ನು ಹೊಂದಿವೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯ ಹೆಸರು ಪಾಲ್ ಜಿಟ್ಟೆಲ್. ಈತನ ಮನೆಯ ತುಂಬಾ ಮಕ್ಕಳ ಅಶ್ಲೀಲ ಚಿತ್ರಗಳೇ ಕಾಣಿಸುತ್ತವೆ. ಮುದ್ರಿತ ಚಿತ್ರಗಳನ್ನು ತನ್ನ ಕಚೇರಿ ಮತ್ತು ಮಲಗುವ ಕೋಣೆಯ ಉದ್ದಕ್ಕೂ ಪೆಟ್ಟಿಗೆಗಳಲ್ಲಿ ಜೋಡಿಸಿಕೊಂಡಿದ್ದ ಎಂದು ಮರಿಯನ್ ಕೌಂಟಿ ಶೆರಿಫ್ ಕಚೇರಿ ಬಹಿರಂಗಪಡಿಸಿದೆ.
ಜಿಟ್ಟೆಲ್ ಅವರನ್ನು ಫೆಬ್ರವರಿ 23 ರಂದು ಅಧಿಕಾರಿಗಳು ಬಂಧಿಸಿದ್ದಾರೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವನ್ನು ತೋರಿಸುವ ಹಲವಾರು ಫೈಲ್‌ಗಳನ್ನು ಅಂತರ್ಜಾಲಕ್ಕೆ ಈತ ಅಪ್‌ಲೋಡ್ ಕೂಡ ಮಾಡಿರುವುದು ಬೆಳಕಿಗೆ ಬಂದಿದೆ. ಪೊಲೀಸರು ಐಪಿ ವಿಳಾಸವನ್ನು ಟ್ರ್ಯಾಕ್ ಮಾಡಿದಾಗ, ಅಜ್ಜ ಸಿಕ್ಕಿಬಿದ್ದಿದ್ದಾನೆ. ಆರೋಪಿ ಮನೆಯಿಂದ ಮುದ್ರಿತ ವಸ್ತುಗಳ ಜೊತೆಗೆ ಡಿಜಿಟಲ್ ಸಂಗ್ರಹಣೆ ಮತ್ತು ಕಂಪ್ಯೂಟರ್ ಸೇರಿದಂತೆ ಅನೇಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ನಂಜನಗೂಡು: ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸಮೀಪ…
ನಂಜನಗೂಡು: ಅಪರಿಚಿತ ಕಾರು ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ…
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಯಿಂದ ಗೊಲಗೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆ ಅಪಘಾತದಲ್ಲಿ ಗೊಲಗೇರಿ ಗ್ರಾಮದ ಯುವಕ…
ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್‌ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಭಟ್ಕಳ ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಅವರು 50,000 ಲಂಚ ಸ್ವೀಕರಿಸುತ್ತಿದ್ದ ವೇಳೆ…
ಗೌರಿಬಿದನೂರು ನಗರದ ವಿನಾಯಕ ನಗರದ ವಾಸಿ ಪದ್ಮ ಜೈನ್ (59) ಎಂಬುವವರ 50 ಗ್ರಾಂ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ…