ಪುತ್ತೂರು: ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೆಯ್ಯೂರು ಗ್ರಾಮದ ಕಟ್ಟತ್ತಾರು, ಕೆಯ್ಯೂರು, ಮಾಡಾವು ಗ್ರಾಮಗಳಲ್ಲಿ ನಡೆದ ಸರಣಿ ಮನೆಗಳ್ಳತನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಈ ಸಂಬಂಧ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಕುಖ್ಯಾತ ಅಂತಾರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೇರಳದ ಕಣ್ಣೂರು ಜಿಲ್ಲೆ ತಲಿಪೆಂಬ ತಾಲೂಕು ಅಲಕೋಡು ವರಂಬಿಲ್‌ ಮೂಲದ ಮಹಮ್ಮದ್‌ ಕೆ.ಯು.(42) ಬಂಧಿತ ಆರೋಪಿ.

ಆರೋಪಿಯ ವಿರುದ್ಧ ಕೇರಳ ರಾಜ್ಯದಲ್ಲಿ 120ಕ್ಕೂ ಹೆಚ್ಚು ಕೇಸ್ ದಾಖಲಾಗಿದ್ದು.
ದಕ್ಷಿಣ ಕನ್ನಡ ಜಿಲ್ಲೆಯ ಕೊಣಾಜೆ, ವಿಟ್ಲ,
ಬಂಟ್ವಾಳ, ಪುಂಜಾಲಕಟ್ಟೆ,ಸವಣೂರು ಬೆಳಂದೂರು ಪಳ್ಳತ್ತಾರು ಸೇರಿದಂತೆ ಹಲವೆಡೆ ಮನೆಗಳ್ಳತನ ಮಾಡಿರುವುದಾಗಿ ಆರೋಪಿಯು ಪೊಲೀಸರ ವಿಚಾರಣೆ ಸಂದರ್ಭದಲ್ಲಿ ಒಪ್ಪಿಕೊಂಡಿದ್ದಾನೆ.

ಬಂಧಿತ ಆರೋಪಿಯಿಂದ ಸುಮಾರು ಎರಡೂವರೆ ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಮೋಟಾರು ಸೈಕಲ್‌ನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಎಂದು ದಕ್ಷಿಣ ಕನ್ನಡ ಜಿಲ್ಲೆ ಎಸ್ಪಿ ತಿಳಿಸಿದ್ದಾರೆ

error: Content is protected !!