ಮೈಸೂರು ನಗರ ಸಿ.ಸಿ.ಬಿ. ಪೊಲೀಸರು ವಿಜಯನಗರ ಪೊಲೀಸ್ ಠಾಣಾ ಕನ್ನಾ ಕಳುವು ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಾಂಕ: ೧೮/೦೭/೨೦೨೨ ರಂದು ಮೈಸೂರು ನಗರ ಸಿಟಿ ಬಸ್ ನಿಲ್ದಾಣದಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿ, ಈತನು ತನ್ನ ಇನ್ನಿಬ್ಬರು ಸಹಚರರೊಂದಿಗೆ ಸೇರಿಕೊಂಡು ಮೈಸೂರು ನಗರ, ಮೈಸೂರು ಜಿಲ್ಲೆ, ಮಂಡ್ಯ ಜಿಲ್ಲೆ, ಬೆಂಗಳೂರು ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಮನೆ ಕನ್ನ ಕಳುವು ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಈತನು ನೀಡಿದ ಮಾಹಿತಿ ಮೇರೆಗೆ ಈ ಕಳುವು ಪ್ರಕರಣಗಳಲ್ಲಿ ಮಾಲುಗಳನ್ನು ಸ್ವೀಕರಿಸಿ ವಿಲೇವಾರಿ ಮಾಡುತ್ತಿದ್ದ ಮತ್ತೊಬ್ಬ ಆರೋಪಿಯನ್ನು ದಿನಾಂಕ: ೧೮/೦೭/೨೦೨೨ ರಂದು ದಸ್ತಗಿರಿ ಮಾಡಲಾಗಿದ್ದು, ಸದರಿ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಒಟ್ಟು ೦೯ ಮನೆ ಕನ್ನ ಕಳುವು ಪ್ರಕರಣಗಳಿಗೆ ಸಂಬಂಧಪಟ್ಟಂತೆ, ರೂ. ೧೦,೧೫,೦೦೦/- ಮೌಲ್ಯದ ೧೯೧ ಗ್ರಾಂ ತೂಕದ ಚಿನ್ನಾಭರಣಗಳು, ೧ಕೆ.ಜಿ.೩೩೦ ಗ್ರಾಂ ತೂಕದ ಬೆಳ್ಳಿಯ ಪದಾರ್ಥಗಳು ಒಂದು ಏರ್‌ಗನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ೧ನೇ ಆರೋಪಿಯು ತನ್ನ ಬಾಲ್ಯಾವಸ್ಥೆಯಿಂದಲೂ ಮನೆಗಳ್ಳತನ ಮಾಡಿ, ಬಾಲ ಮಂದಿರದಲ್ಲಿದ್ದು, ಅಲ್ಲಿಂದ ತಪ್ಪಿಸಿಕೊಂಡು ಹೋಗಿ, ನಂತರ ಪ್ರಾಪ್ತ ವಯಸ್ಕಾನಾದ ನಂತರವು ತನ್ನ ಕಳ್ಳತನದ ಪ್ರವೃತ್ತಿಯನ್ನು ಮುಂದುವರೆಸಿಕೊಂಡು ಬಂದಿರುವುದು ವಿಚಾರಣೆಯಿಂದ ತಿಳಿದು ಬಂದಿರುತ್ತದೆ. ಉಳಿದ ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ.
ಈ ಪತ್ತೆ ಕಾರ್ಯದಿಂದ ಮೈಸೂರು ನಗರ ವಿಜಯನಗರ ಠಾಣೆಯ-೦೧, ಮೇಟಗಳ್ಳಿ-೦೧, ಇಲವಾಲ -೦೨, ಮೈಸೂರು ದಕ್ಷಿಣ ಠಾಣೆ-೦೩, ಕೆ.ಆರ್.ಎಸ್. ಠಾಣೆ-೦೧, ಬೆಂಗಳೂರು ಜಿಲ್ಲೆಯ ಕುಂಬಳಗೋಡು ಠಾಣೆ-೦೧ ಮನೆ ಕನ್ನ ಕಳುವು ಪ್ರಕರಣಗಳು ಪತ್ತೆಯಾಗಿರುತ್ತವೆ.
ಸಿ.ಸಿ.ಬಿ. ಪೊಲೀಸರು ಲಕ್ಷ್ಮೀಪುರಂ ಪೊಲೀಸ್ ಠಾಣೆಯ ದ್ವಿ ಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಒಬ್ಬ ಆರೋಪಿಯನ್ನು ದಿನಾಂಕ: ೨೯/೦೬/೨೦೨೨ ರಂದು ದಸ್ತಗಿರಿ ಮಾಡಿ ವಿಚಾರಣೆ ಮಾಡಲಾಗಿ, ಈತನು ಮೈಸೂರು ನಗರ, ಬೆಂಗಳೂರು, ರಾಮನಗರ ಜಿಲ್ಲೆಯ ವಿವಿಧ ಕಡೆಗಳಲ್ಲಿ ದ್ವಿ ಚಕ್ರ ವಾಹನಗಳನ್ನು ಕಳ್ಳತನ ಮಾಡಿರುವುದಾಗಿ ತಿಳಿಸಿದರ ಮೇರೆಗೆ ಆರೋಪಿತನಿಂದ ರೂ. ೯,೦೦,೦೦೦/- ಮೌಲ್ಯದ ವಿವಿಧ ಕಂಪನಿಯ ೦೬ ದ್ವಿ ಚಕ್ರ ವಾಹನಗಳನ್ನು ಅಮಾನತ್ತುಪಡಿಸಿಕೊಂಡಿರುತ್ತಾರೆ.
ಈ ಪತ್ತೆ ಕಾರ್ಯದಿಂದ ಮೈಸೂರು ನಗರ ಲಕ್ಷ್ಮೀಪುರಂ ಠಾಣೆಯ-೦೨, ಬೆಂಗಳೂರು ಬ್ಯಾಟರಾಯನಪುರ-೦೧, ರಾಜರಾಜೇಶ್ವರಿ ನಗರ-೦೧, ಚಾಮರಾಜಪೇಟೆ-೦೧, ರಾಮನಗರ ಜಿಲ್ಲೆಯ ಚನ್ನಪಟ್ಟಣ ಠಾಣೆ-೦೧ ದ್ವಿ ಚಕ್ರ ವಾಹನ ಕಳ್ಳತನ ಪ್ರಕರಣಗಳು ಪತ್ತೆಯಾಗಿರುತ್ತವೆ.
ಮೇಲ್ಕಂಡ ೨ ಪ್ರಕರಣಗಳ ಪತ್ತೆ ಕಾರ್ಯವನ್ನು ಮೈಸೂರು ನಗರದ ಡಿ.ಸಿ.ಪಿ. ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ವಿಭಾಗ ರವರಾದ ಶ್ರೀಮತಿ. ಗೀತ ಎಂ.ಎಸ್., ಐ.ಪಿ.ಎಸ್. ರವರ ಮಾರ್ಗದರ್ಶನದಲ್ಲಿ ಸಿ.ಸಿ.ಬಿ ಘಟಕದ ಎ.ಸಿ.ಪಿ.ರವರಾದ ಶ್ರೀ ಸಿ.ಕೆ.ಅಶ್ವತ್ಥನಾರಾಯಣರವರ ನೇತೃತ್ವದಲ್ಲಿ ಸಿ.ಸಿ.ಬಿ. ಹೆಚ್&ಬಿ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್‌ರವರಾದ ಶ್ರೀ. ಶೇಖರ್.ಜಿ ರವರು ಮತ್ತು ಇತರೇ ಅಧಿಕಾರಿ ಮತ್ತು ಸಿಬ್ಬಂದಿಗಳು ಮಾಡಿರುತ್ತಾರೆ.
ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.
ನಂಜನಗೂಡು: ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸಮೀಪ…
ನಂಜನಗೂಡು: ಅಪರಿಚಿತ ಕಾರು ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ…
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಯಿಂದ ಗೊಲಗೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆ ಅಪಘಾತದಲ್ಲಿ ಗೊಲಗೇರಿ ಗ್ರಾಮದ ಯುವಕ…
ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್ಓಸಿ ನೀಡಿ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಭಟ್ಕಳ ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಅವರು 50,000 ಲಂಚ ಸ್ವೀಕರಿಸುತ್ತಿದ್ದ ವೇಳೆ…
ಗೌರಿಬಿದನೂರು ನಗರದ ವಿನಾಯಕ ನಗರದ ವಾಸಿ ಪದ್ಮ ಜೈನ್ (59) ಎಂಬುವವರ 50 ಗ್ರಾಂ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ…