Latest

ಹೆಂಡತಿಯ ತಲೆಗೆ ಬಾಣಲೆಯಿಂದ ಹೊಡೆದು ಕೊಲೆ

ಮಾದಕ ವ್ಯಸನಿಯಾಗಿದ್ದ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಚಕ್ಕಿವಾಲದಲ್ಲಿ ನಡೆದಿದೆ.
ಪತಿ ಪರಮಜಿತ್ ಸಿಂಗ್ ಮಾದಕ ವ್ಯಸನಿಯಾಗಿದ್ದು, ಡ್ರಗ್ಸ್ ಸೇವಿಸಲು ತನ್ನ ಹೆಂಡತಿ ಬಳಿ ಹಣ ಕೇಳಿರುತ್ತಾನೆ. ಡ್ರಗ್ಸ್​ಗಾಗಿ ಹಣ ಕೊಡಲು ಹೆಂಡತಿ ನೀಲಂ ರಾಣಿ ನಿರಾಕರಿಸಿದಾಗ ಆಕೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಪತ್ನಿಯ ತಲೆಗೆ ಬಾಣಲೆಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಹಂತಕ ಪತಿ ತನ್ನ ಪತ್ನಿಯ ಮೇಲೆ ಮೊದಲು ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾನೆ. ಕುಡುಗೋಲು ಮುರಿದಾಗ ಬಾಣಲೆಯಿಂದ ಪತ್ನಿಯ ತಲೆಗೆ 10 ಬಾರಿ ಹೊಡೆದಿದ್ದಾನೆ. ಈ ಪರಿಣಾಮ ತೀವ್ರ ರಕ್ತಸ್ರಾವದಿಂದ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ಪೊಲೀಸ್ ಮುಖ್ಯಸ್ಥ ದಲ್ಜಿತ್ ಸಿಂಗ್ ತಿಳಿಸಿದ್ದಾರೆ .
ಈ ಸಂದರ್ಭದಲ್ಲಿ ಮೃತಳ ಅತ್ತೆ ಮಾತನಾಡಿ, ನನ್ನ ಮಗ ಮಾದಕ ವ್ಯಸನಿಯಾಗಿದ್ದು, ಈ ಕಾರಣದಿಂದ ಈ ಕೃತ್ಯ ಎಸಗಿದ್ದಾನೆ. ಈ ಘಟನೆ ನಡೆಯುವ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ಹೇಳಿದ್ದಾರೆ.
ಆರೋಪಿ ಪರಮಜಿತ್ ಸಿಂಗ್ ಈ ಹತ್ಯೆ ನಡೆಸಿದ ನಂತರ ಮೊಗ ಪೊಲೀಸ್ ಠಾಣೆಗೆ ತೆರಳಿ ಅಪರಾಧವನ್ನು ಒಪ್ಪಿಕೊಂಡು ಶರಣಾಗಿದ್ದಾನೆ. ವಿಷಯ ತಿಳಿದ ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago