ರೋಹಿಣಿ ಸಿಂಧೂರಿ(ಐಎಎಸ್) ಮತ್ತು ಡಿ. ರೂಪಾ(ಐಪಿಎಸ್) ನಡುವಿನ ಜಟಾಪಟಿಗೆ ಆತ್ಮಹತ್ಯೆ ಮಾಡಿಕೊಂಡ ಡಿ.ಕೆ. ರವಿ(ಐಎಎಸ್) ಅವರ ಪತ್ನಿ ಕುಸುಮಾ ಹನುಮಂತರಾಯಪ್ಪ ಎಂಟ್ರಿ ಕೊಟ್ಟಿದ್ದಾರೆ. ಸಿಂಧೂರಿರವರ ವಿರುದ್ಧ ರೂಪಾರವರು ೧೯ ಗಂಭೀರ ಆರೋಪಗಳನ್ನು ಮಾಡಿದ್ದು, ಅದರಲ್ಲಿ ಡಿ.ಕೆ. ರವಿ ಸಾವಿನ ವಿಚಾರ ಹಾಗೂ ಡಿ.ಕೆ. ರವಿ ಮತ್ತು ರೋಹಿಣಿ ಸಿಂಧೂರಿ ನಡುವೆ ಪ್ರೇಮ ಸಲ್ಲಾಪ ನಡೆಯುತ್ತಿತ್ತು ಎನ್ನುವುದೂ ಸೇರಿದಂತೆ ಇನ್ನು ಹಲವು ವಿಚಾರಗಳನ್ನು ಹೇಳಿದ್ದರು.
ಐಎಎಸ್ ಅಧಿಕಾರಿಯಾಗಿದ್ದ ಡಿ.ಕೆ. ರವಿ ಸಂಭಾವಿತ ವ್ಯಕ್ತಿ. ಸಿಬಿಐ ವರದಿಯಲ್ಲಿ ಡಿ.ಕೆ. ರವಿ ಮತ್ತು ರೋಹಿಣಿ ಸಿಂಧೂರಿರವರ ಚಾಟ್ಸ್ ಬಗ್ಗೆ ಉಲ್ಲೇಖ ಇದ್ದು, ರವಿ ಅವರು ಎಂದಾದರೂ ಲಿಮಿಟ್ ಕ್ರಾಸ್ ಮಾಡಿದ ತಕ್ಷಣವೇ ಅವರನ್ನು ಬ್ಲಾಕ್ ಮಾಡಬಹುದಿತ್ತು. ಪರ್ಮನೆಂಟ್ ಆಗಿ ಬ್ಲಾಕ್ ಮಾಡಲಿಲ್ಲ ಈಕೆ. ಬ್ಲಾಕ್ ಮಾಡದೆ ಇದ್ದದ್ದು ಉತ್ತೇಜನ ಕೊಡುವ ಹಾಗೆ ಎಂಬಂತೆಯೇ ಕಾಣುತ್ತದೆ ಎಂಬುದು ಅನೇಕರ ಅಭಿಪ್ರಾಯ.
ʻʻನನ್ನ ಪ್ರಶ್ನೆ ಇಷ್ಟೇ, ರೋಹಿಣಿ ಸಿಂಧೂರಿ ಯಾಕೆ ರವಿಯನ್ನು ಬ್ಲಾಕ್ ಮಾಡಲಿಲ್ಲ. ಅವರಿಬ್ಬರ ಪ್ರೇಮ ಸಲ್ಲಾಪ ಸಿಬಿಐ ಕೊಟ್ಟ ಫೈನಲ್ ರಿಪೋರ್ಟ್ ನಲ್ಲಿ ಎಲ್ಲರ ಕೈ ಸೇರಿದೆ. ಒಬ್ಬ ಪುರುಷ ಎಲ್ಲೆ ಮೀರಿ ನಡೆದಾಗ ಈಕೆ ಜವಾಬ್ದಾರಿಯುತ ಹೆಣ್ಣು ಮಗಳಾಗಿ ಯಾಕೆ ಬ್ಲಾಕ್ ಮಾಡಲಿಲ್ಲ? ಅಂದರೆ ಉತ್ತೇಜನ ಕೊಟ್ಟಂತೆ ಅಲ್ಲವೇ? ಅದೇ ರೀತಿ ಐಎಎಸ್ ಅಧಿಕಾರಿಗಳಿಗೆ ಕಳಿಸಿದ ಆ ರೀತಿಯ ಚಿತ್ರಗಳು ಉತ್ತೇಜನ ಕೊಡುವುದು ಎಂದು ಅರ್ಥ ಆಗುವುದಿಲ್ಲವೇ? ಈ ರೀತಿಯ ಚಿತ್ರಗಳನ್ನು ಯಾವ ಯಾವ ಅಧಿಕಾರಿಗೆ, ಯಾಕೆ ಕಳಿಸಿದರು, ಹಾಗೂ ಸೇವಾ ನಿಯಮ ಉಲ್ಲಂಘನೆ ಮಾಡಿರುವ ಬಗ್ಗೆ ಸ್ಪಷ್ಟೀಕರಣ ನೀಡಲಿʼʼ ಎಂದು ರೂಪಾ ಕೇಳಿದ್ದಾರೆ.
ಈ ಎಲ್ಲಾ ಆರೋಪಗಳ ಚರ್ಚೆಗಳನ್ನು ನೋಡುತ್ತಿದ್ದ ಡಿಕೆ ರವಿ ರವರ ಪತ್ನಿ ರಾಜರಾಜೇಶ್ವರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಕುಸುಮರವರು ಈ ವಿಚಾರದ ಯಾವುದೇ ಉಲ್ಲೇಖವನ್ನು ಮಾಡದೆ ತಮ್ಮ ಟ್ವಿಟರ್ ಖಾತೆಯಲ್ಲಿ
“ Karma will get back at you , sooner or later it surely will ” ಕರ್ಮವು ತಮಗೆ ಹಿಂತಿರುಗುತ್ತದೆ, ಬೇಗ ಅಥವಾ ತಡವಾಗಿ, ಬರುವುದು ಖಚಿತ. ಎಂದು ಬರೆದಿದ್ದಾರೆ.
ಕುಸುಮಾ ರವರ ಟ್ವಿಟ್ಗೆ ಪ್ರತಿಕ್ರಿಯಿಸಿರುವ ರೂಪಾ ರವರು ಈ ರೀತಿ ಬರೆದುಕೊಂಡಿರುತ್ತಾರೆ.
“ಕುಸುಮಾ, ಒಬ್ಬ ಮಹಿಳೆಯಾಗಿ ನಿನ್ನ ನೋವು ನನಗೆ ಅರ್ಥವಾಗುತ್ತದೆ. ಮತ್ತು ಅನೇಕ ಇತರ ಮಹಿಳೆಯರ ನೋವು (ಅವರಲ್ಲಿ ಕೆಲವರು ಐಎಎಸ್‌ನಲ್ಲಿ), ಇನ್ನೂ ಅಸಹಾಯಕರಾಗಿದ್ದಾರೆ. ಆದರೆ ಅಂತಿಮವಾಗಿ, ಯಾರಾದರೂ ಅಪರಾಧಿಯ ವಿರುದ್ಧ ನಿಲ್ಲಬೇಕು (ಅವಳು ಮಹಿಳೆಯಾಗಿದ್ದರೂ ಸಹ). ಈ ವಿಷಯದಲ್ಲಿ ನಿಮ್ಮೊಂದಿಗೆ. ಮರುಕಳಿಸದಂತೆ ದೇವರು ಅವಳಿಗೆ ಸಹಾನುಭೂತಿ ಮತ್ತು ಸದ್ಬುದ್ಧಿಯನ್ನು ನೀಡಲಿ.” ಎಂದು ಬರೆದಿದ್ದಾರೆ.
ನಂಜನಗೂಡು: ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸಮೀಪ…
ನಂಜನಗೂಡು: ಅಪರಿಚಿತ ಕಾರು ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ…
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಯಿಂದ ಗೊಲಗೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆ ಅಪಘಾತದಲ್ಲಿ ಗೊಲಗೇರಿ ಗ್ರಾಮದ ಯುವಕ…
ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್‌ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಭಟ್ಕಳ ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಅವರು 50,000 ಲಂಚ ಸ್ವೀಕರಿಸುತ್ತಿದ್ದ ವೇಳೆ…
ಗೌರಿಬಿದನೂರು ನಗರದ ವಿನಾಯಕ ನಗರದ ವಾಸಿ ಪದ್ಮ ಜೈನ್ (59) ಎಂಬುವವರ 50 ಗ್ರಾಂ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ…