ಪಿರಿಯಾಪಟ್ಟಣ ತಾಲೂಕಿನ ಬೆಮ್ಮತ್ತಿ ಗಿರಿಜನ ಹಾಡಿಯ ಮಹಿಳೆಯರ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಶಾಸಕ ಕೆ. ಮಹಾದೇವ್ ಬೆಂಬಲಿಗರು ಎನ್ನಲಾದ ಐಲಾಪುರ ಗ್ರಾಮದ ಲೋಕೇಶ್ ಮತ್ತು ಆತನ ಸಂಬಂಧಿ ಕುಳ್ಳ ಎಂಬುವರು ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.
ಜಯಮ್ಮ, ಲಕ್ಷ್ಮಿ, ಶೋಭ ಎಂಬುವವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಆರೋಪಿಗಳು ಏಕಾಏಕಿ ಬಂದವರೇ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ಜತೆಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದ್ದಾರೆಂದು ಮಹಿಳೆಯರು ಆರೋಪಿಸಿದ್ದಾರೆ. ತೀವ್ರ ಹಲ್ಲೆಗೊಳಗಾದವರನ್ನು ಪಿರಿಯಾಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೈಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ಎರಡೂ ಕಡೆಯಿಂದ ದೂರು ದಾಖಲಾಗಿದೆ.