‘ಮಾಜಾ ಟಾಕೀಸ್ ‘ ಖ್ಯಾತಿಯ ಚಿತ್ರನಟ ನವೀನ್ ಡಿ ಪಡೀಲ್ ಚಿತ್ರೀಕರಣದ ವೇಳೆ ಬಿದ್ದು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಳ್ತಂಗಡಿಯ ಮಡಂತ್ಯಾರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಮೂರು ತಿಂಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.
ರಂಗಭೂಮಿ ಹಾಗೂ ತುಳು ಸಿನಿಮಾಗಳಲ್ಲಿ ನಟ ನವೀನ್ ಡಿ ಪಡೀಲ್ ಹೆಸರು ಚಿರಪರಿಚಿತ.