ಮಂಗಳೂರಿನ ಉಳ್ಳಾಳದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಸೋಮವಾರ ಮೂರು ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಒಟ್ಟು 12 ಕೋಟಿ ರೂ. ಮೌಲ್ಯದ ನಗದು ಮತ್ತು ಚಿನ್ನಾಭರಣ ದರೋಡೆ ಮಾಡಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಮಧುರೈ ಸಮೀಪ ಬಂಧಿಸಿದ್ದಾರೆ.
ಬಂಧಿತರನ್ನು ಮುರುಗನ್, ಪ್ರಕಾಶ್ ಅಲಿಯಾಸ್ ಜೈಸ್ವಾ ಮತ್ತು ಮಣಿವಣ್ಣನ್ ಎಂದು ಗುರುತಿಸಲಾಗಿದೆ. ತಮಿಳುನಾಡಿನ ವಿವಿಧ ಪ್ರದೇಶಗಳಿಂದ ಈ ಮೂವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ 2 ಗೋಣಿಚೀಲಗಳು, ತಲ್ವಾರ್, ಮತ್ತು 2 ಪಿಸ್ತೂಲ್‌ಗಳನ್ನು ಜಪ್ತಿ ಮಾಡಲಾಗಿದೆ. ಬಂಧಿತರು ತಮಿಳುನಾಡಿನ ತಿರುನೆಲ್ವೇಲಿ ಮೂಲದವರಾಗಿದ್ದಾರೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಜನವರಿ 17 ರಂದು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಳದ ಕೆ.ಸಿ.ರೋಡ್‌ನಲ್ಲಿ ಇರುವ ಸಹಕಾರಿ ಬ್ಯಾಂಕ್‌ಗೆ ಮಧ್ಯಾಹ್ನದ ವೇಳೆ ಖದೀಮರ ಗುಂಪು ನುಗ್ಗಿ ಸುಮಾರು 12 ಕೋಟಿ ರೂ. ಮೌಲ್ಯದ ನಗದು ಮತ್ತು ಚಿನ್ನಾಭರಣ ದೋಚಿ ಪರಾರಿಯಾಗಿತ್ತು.
ಘಟನೆಯ ನಂತರ ಆರೋಪಿಗಳು ಮಹಾರಾಷ್ಟ್ರದ ಕಾರು ಬಳಸಿಕೊಂಡು ತಮಿಳುನಾಡಿನ ತಿರುನೆಲ್ವೇಲಿಗೆ ಪರಾರಿಯಾಗಿದ್ದರು.
ಕೆಂಡ್ರ ವಿಭಾಗದ ಮಹಿಳಾ ಠಾಣೆ ಪೊಲೀಸರು, 37 ವರ್ಷದ ತಮಿಳುನಾಡು ಮೂಲದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಇಬ್ಬರನ್ನು…
ಚಾಮರಾಜನಗರ ಜಿಲ್ಲೆ, ಕೊಳ್ಳೇಗಾಲ ಪಟ್ಟಣದ ಮೋಳೆ ರಿಂಗ್ ರಸ್ತೆಯಲ್ಲಿ ಒಂದು ಅಂಶಾತುರ ಘಟನೆ ನಡೆದಿದೆ, ಕಾಡು ರಕ್ಷಣೆ ಮತ್ತು ಪರಿಸರ…
ಸಿಂಧನೂರು ತಾಲ್ಲೂಕಿನ ಉಪ್ಪಳ ಮತ್ತು ದಢೇಸುಗೂರು ಗ್ರಾಮದ ರೈತರಿಂದ 4,500 ಚೀಲ ಭತ್ತವನ್ನು ಖರೀದಿಸಿದ್ದ ವ್ಯಾಪಾರಿ ಮಲ್ಲೇಶ ₹60 ಲಕ್ಷ…
ಹುಕ್ಕೇರಿ ತಾಲೂಕಿನ ಸುಲ್ತಾನಪುರದಲ್ಲಿ ಏಳು ವರ್ಷದ ಬಾಲಕನನ್ನು 4 ಲಕ್ಷ ರೂ.ಗೆ ಮಾರಾಟ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಿರುವ…
ಕುಂದಗೋಳ: ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದಲ್ಲಿ ಸ್ವಚ್ಛತೆಗೆ ಸಂಬಂಧಿಸಿದ ಸಮಸ್ಯೆಗಳು ತೀವ್ರ ಸ್ವರೂಪ ತಾಳುತ್ತಿದ್ದು, ಗ್ರಾಮ ಪಂಚಾಯಿತಿ ಮುಂಭಾಗದ ರಸ್ತೆಗಳು…
ಹುಬ್ಬಳ್ಳಿಯ ಟಿಪ್ಪು ನಗರದಲ್ಲಿ ಘಟನೆ ನಡೆದಿದ್ದು, ವಿವಾಹಿತ ಮಹಿಳೆಯೊಂದಿಗೆ ಮಾತನಾಡಿದ ಯುವಕನನ್ನು ಕೆಲವರು ಹಾಡಹಗಲೇ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಯುವಕನನ್ನು…