ಉತ್ತರ ಕನ್ನಡ ಜಿಲ್ಲೆಯಲ್ಲಿ ಏಪ್ರಿಲ್ 5ರಂದು ಬಾಬು ಜಗಜೀವನ ರಾಮ್ ಜಯಂತಿ ಹಾಗೂ ಏಪ್ರಿಲ್ 14ರಂದು ಬಿ ಆ‌ರ್ ಅಂಬೇಡ್ಕ‌ರ್ ಜಯಂತಿ ಆಚರಣೆ ನಡೆಯಲಿದೆ. ಈ ಎರಡು ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಸೂಚಿಸಿದ್ದಾರೆ.

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. `ಏಪ್ರಿಲ್ 14ರಂದು ನಡೆಯುವ ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಗಳಿಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಲಾರ್ಪಣೆ, ಪುಷ್ಪ ನಮನ ಮತ್ತು ಪೂಜೆ ಸಲ್ಲಿಸಲಾಗುತ್ತದೆ. ಇದಾದ ನಂತರ ಭಾವಚಿತ್ರಗಳನ್ನು ತರೆದ ವಾಹನದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ವಿಜೃಂಭಣೆಯ ಮೆರವಣಿಗೆ ಆಯೋಜಿಸಬೇಕು’ ಎಂದವರು ತಿಳಿಸಿದರು
ಮೆರವಣಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಕುಡಿಯುವ ನೀರು ಮತ್ತು ಮಜ್ಜಿಗೆ ವ್ಯವಸ್ಥೆ ಮಾಡುವಂತೆ ತಿಳಿಸಿದ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆವತಿಯಿಂದ ಮೆರವಣಿಗೆಯಲ್ಲಿ ಭಾಗವಹಿಸಲು ಕಲಾತಂಡಗಳನ್ನು ಪ್ರಾಯೋಜಿಸುವಂತೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಮಹಿಳೆಯರಿಂದ ಕುಂಭಮೇಳದ ಮೆರವಣಿಗೆಗೆ ವ್ಯವಸ್ಥೆ ಮಾಡುವಂತೆ ಸೂಚಿಸಿದರು. ಬಾಬು ಜಗಜೀವನ ರಾಮ್ ಮತ್ತು ಬಿ ಆರ್ ಅಂಬೇಡ್ಕ‌ರ್ ಅವರ ಕುರಿತು ವಿಷಯ ತಜ್ಞರಿಂದ ವಿಶೇಷ ಉಪನ್ಯಾಸ ಆಯೋಜಿಸಬೇಕು. ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪ್ರತಿಭಾನ್ವಿತರಿಗೆ ಹಾಗೂ ಕ್ರೀಡಾಪಟುಗಳಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಬೇಕು’ ಎಂದು ಸೂಚಿಸಿದರು.
ಕಾರ್ಯಕ್ರಮಕ್ಕೆ ಶಿಷ್ಠಾಚಾರದಂತೆ ಎಲ್ಲಾ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಮೆರವಣಿಗೆ ಮತ್ತು ಸಭಾ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಹಾಜರಿರಬೇಕು. ಪೊಲೀಸ್‌ ಇಲಾಖೆ ವತಿಯಿಂದ ಮೆರವಣಿಗಗೆ ಸೂಕ್ತ ಪೊಲೀಸ್ ಭದ್ರತೆ ಮತ್ತು ಪೊಲೀಸ್‌ ಬ್ಯಾಂಡ್ ಒದಗಿಸಬೇಕು’ ಎಂದರು. ಈ ಸಭೆಯಲ್ಲಿ ಉಪವಿಭಾಗಾಧಿಕಾರಿ ಕನಿಷ್ಕ, ಜಿ ಪಂ ಉಪಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವ‌ರ್, ಸಮುದಾಯದ ಮುಖಂಡರಾದ ದೀಪಕ್ ಕುಡಾಲಕರ್, ಹನುಮಂತ ತಳವಾರ್, ಮಾಲ ಪ್ರದೀಪ್ ಹುಲಸ್ವಾರ, ಶ್ಯಾಮ್ ಸುಂದರ್‌ ಗೋಕರ್ಣ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!